ಬಿಸಿ ಬಿಸಿ ಸುದ್ದಿ

ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು; ತೋಟಗಾರಿಕೆ ಇಲಾಖೆ ವತಿಯಿಂದ 2024ನೇ ಜನವರಿ 18 ರಿಂದ 26 ರವರೆಗೆ “ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯ ವಿಷಯಾಧಾರಿತ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರದರ್ಶನದ ಪ್ರಯುಕ್ತ ಸರ್ಕಾರಿ/ ಖಾಸಗಿ ಅಲಂಕಾರಿಕ ತೋಟಗಾರಿಕಾ ಆಸಕ್ತರು ತಮ್ಮ ಮನೆ, ಕಚೇರಿ ಅಥವಾ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಲಂಕಾರಿಕ ತೋಟಗಳು, ತಾರಸಿ/ ಕೈತೋಟಗಳು, ತರಕಾರಿ/ ಔಷಧಿ ಗಿಡಗಳು, ಕುಂಡಗಳಲ್ಲಿ ಬೆಳೆದ ವಿವಿಧ ಜಾತಿಯ ಗಿಡಗಳು, ಇಕೆಬಾನ, ಜಾನೂರ್, ಥಾಯ್ ಆರ್ಟ್ ಮತ್ತು ಪೂರಕ ಕಲೆಗಳಿಗೆ ಸಂಬಂಧಿಸಿದಂತೆ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಇಕೆಬಾನ, ಜಾನೂರ್, ಥಾಯ್ ಆರ್ಟ್, ತರಕಾರಿ ಕೆತ್ತನೆ ಮತ್ತು ಇತರೆ ಪುರಕ ಕಲೆಗಳಿಗೆ ಸಂಬಂಧಿಸಿದಂತೆ ಆಸಕ್ತರು / ಪ್ರದರ್ಶಕರಿಂದ ಅರ್ಜಿಗಳನ್ನು ಜನವರಿ 1 ರಿಂದ 6 ರವರೆಗೆ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಪಡೆಯಲು ತೋಟಗಾರಿಕಾ ಜಂಟಿ ನಿರ್ದೇಶಕರು (ಯೋಜನೆ) ಲಾಲ್‍ಬಾಗ್, ಬೆಂಗಳೂರು ಕಚೇರಿಯಲ್ಲಿ ಅರ್ಜಿಗಳನ್ನು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೋನಿಷಾ ಮೊಬೈಲ್ ಸಂಖ್ಯೆ: 7892655167 ಅಥವಾ ನಂದಿನಿ ಮೊಬೈಲ್ ಸಂಖ್ಯೆ: 6364037030 ಇವರನ್ನು ಸಂಪರ್ಕಿಸುವುದು.

ವಿವಿಧ ಅಲಂಕಾರಿಕ ತೋಟಗಳ ಸ್ಪರ್ಧೆ / ಕುಂಡಗಳಲ್ಲಿ ಬೆಳೆದ ಗಿಡಗಳ ಸ್ಪರ್ಧೆಗೆ ಅರ್ಜಿಗಳನ್ನು ಜನವರಿ 8 ರಿಂದ 16 ರವರೆಗೆ ಸ್ವೀಕರಿಸಲಾಗುವುದು. ಗಾಜಿನ ಮನೆ ಆವರಣದಲ್ಲಿ ಪ್ರದರ್ಶಿಕೆಗಳನ್ನು ಪ್ರದರ್ಶಿಸಲು ಅರ್ಜಿಗಳನ್ನು ಜನವರಿ 15 ರಿಂದ 17 ರವರೆಗೆ ಸ್ವೀಕರಿಸಲಾಗುವುದು. ಕಾಯಕವೇ ಕೈಲಾಸ ಕುರಿತ ಪ್ರಬಂಧ ಸ್ಪರ್ಧೆ (ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಮಾತ್ರ) ಅರ್ಜಿಗಳನ್ನು ಜನವರಿ 10 ರಿಂದ 19 ರವರೆಗೆ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಪಡೆಯಲು ತೋಟಗಾರಿಕಾ ಜಂಟಿ ನಿರ್ದೇಶಕರು (ತೋಟದ ಬೆಳೆಗಳು) ಲಾಲ್‍ಬಾಗ್, ಬೆಂಗಳೂರು ಕಚೇರಿಯಲ್ಲಿ ಅರ್ಜಿಗಳನ್ನು ಬೆಳಿಗ್ಗೆ 10 ರಿಂದ 5 ಗಂಟೆಯವರೆಗೆ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿದ್ದಲಿಂಗೇಶ್ವರ ಮೊಬೈಲ್ ಸಂಖ್ಯೆ: 7019963590 ಅಥವಾ ಜ್ಯೋತಿ ಮೊಬೈಲ್ ಸಂಖ್ಯೆ: 8904819351 ಇವರನ್ನು ಸಂಪರ್ಕಿಸುವುದು.

ಮಳಿಗೆಗಳ ಹಂಚಿಕೆಗಾಗಿ 2023 ನೇ ಡಿಸೆಂಬರ್ 28 ರಿಂದ 2024 ನೇ ಜನವರಿ 6 ರವರೆಗೆ ಸ್ವೀಕರಿಸಲಾಗುವುದು. ಅರ್ಜಿಗಳನ್ನು ಪಡೆಯಲು ತೋಟಗಾರಿಕಾ ಜಂಟಿ ನಿರ್ದೇಶಕರು (ಹಣ್ಣುಗಳು) ಲಾಲ್‍ಬಾಗ್, ಬೆಂಗಳೂರು ಕಚೇರಿಯಲ್ಲಿ ಅರ್ಜಿಗಳನ್ನು ಬೆಳಿಗ್ಗೆ 10 ರಿಮದ 5 ಗಂಟೆಯವರೆಗೆ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಂಕಟೇಶ್ ಮೊಬೈಲ್ ಸಂಖ್ಯೆ: 9900150979, ಜಗದೀಶ್ ಮೊಬೈಲ್ ಸಂಖ್ಯೆ: 9986428313 ಅಥವಾ ರಾಮಮೂರ್ತಿ ಮೊಬೈಲ್ ಸಂಖ್ಯೆ: 9844352832 ಇವರನ್ನು ಸಂಪರ್ಕಿಸುವಂತೆ ಲಾಲ್‍ಬಾಗ್ ಸಸ್ಯತೋಟದ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago