ಬಿಸಿ ಬಿಸಿ ಸುದ್ದಿ

`ಶರಣ ಸಂಸ್ಕøತಿ ಮತ್ತು ನಾವು’ ವಿಚಾರಗೋಷ್ಠಿ

ಕಲಬುರಗಿ: 12ನೇ ಶತಮಾನದಲ್ಲಿ ಬಸವಾದಿ ಶರಣರಿಂದ ಶುರುವಾದ ನಮ್ಮ ಶರಣ ಸಂಸ್ಕøತಿ ಮಹಾಸಾಗರವಿದ್ದಂತೆ. ನಮ್ಮೆಲ್ಲರ ಬದುಕಿನ ವಿಚಾರ ಸಂಸ್ಕøತಿಯಾಗಿರುವ ಶರಣ ಶಂಸ್ಕøತಿ ಯಾವುದೇ ಒಂದು ಜಾತಿಗೆ ಸೀಮಿತವಾಗಿರುವ ತತ್ವವಲ್ಲ. ಶರಣರ ವಚನಗಳು ಕೇವಲ ಸಾಹಿತ್ಯ ವಸ್ತುಗಳಾಗದೇ ಜನರ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ನಿವೃತ್ತ ಐಎಎಸ್ ಅಧಿಕಾರಿಗಳಾದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ.ಸೋಮಶೇಖರ ಹೇಳಿದರು.

ಗಡಿಭಾಗದಲ್ಲಿ ಕನ್ನಡ ಕಟ್ಟಿ ಬೆಳೆಸಿದ ಭಾಲ್ಕಿಯ ಲಿಂ. ಶ್ರೀ ಡಾ. ಚನ್ನಬಸವ ಪಟ್ಟದ್ದೇವರ ಜಯಂತಿ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಎಕೆಆರ್ ದೇವಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ `ಶರಣ ಸಂಸ್ಕøತಿ ಮತ್ತು ನಾವು’ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ನಡೆಯುತ್ತಿರುವ ಅನೇಕ ತರಹ ಕೆಡಕುಗಳಿಗೆ ಉತ್ತಮ ಸಂಸ್ಕಾರದ ಕೊರತೆಯೇ ಪ್ರಮುಖ ಕಾರಣವಾಗಿದೆ. ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ, ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಒಳ್ಳೆಯ ನಾಗರಿಕರನ್ನಾಗಿ ರೂಪಿಸುವ ಬಹು ದೊಡ್ಡ ಜವಾಬ್ದಾರಿ ಪಾಲಕರಾದ ನಮ್ಮ ಮೇಲಿದೆ ಎಂದು ಹೇಳಿದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಇಂದಿನ ರೋಗಗ್ರಸ್ಥ ಸಮಾಜಕ್ಕೆ 12ನೇ ಶತಮಾನದ ಶರಣರ ವಚನ ಸಾಹಿತ್ಯ ಸಂಜೀವಿನಿ ಇದ್ದ ಹಾಗೆ. ಇದನ್ನು ಇಂದು ಪ್ರತಿಯೊಬ್ಬರೂ ಅಳವಡಿಸಿಕೊಂಡರೆ ಸಮಾಜವೂ ಸಹ ಆರೋಗ್ಯಯುತವಾಗಿರುತ್ತದೆ ಎಂದ ಅವರು, ಕನ್ನಡ ಚರಿತ್ರೆಯ ಪುಟದಲ್ಲಿ ಭಾಲ್ಕಿಯ ಶ್ರೀ ಡಾ. ಚನ್ನಬಸವ ಪಟ್ಟದ್ದೇವರು ಇವರ ಹೆಸರು ಅಜರಾಮರ. ಅದು ಹೈದರಾಬಾದ ನಿಜಾಮರ, ಕ್ರೂರ ರಜಾಕಾರರ ಆಳ್ವಿಕೆಯಿಂದ ತತ್ತರಿಸಿ ಹೋದ ನೆಲದಲ್ಲಿ ಜತೆಗೆ ಸಂಕಷ್ಟದ ಕಾಲದಲ್ಲಿ ಶ್ರೀಗಳು ಹೊರಗೆ ಉರ್ದು ಶಾಲೆಯ ನಾಮಫಲಕ ಹಾಕಿಕೊಂಡು, ಒಳಗೆ ಕನ್ನಡ ಅಕ್ಷರದ ದೀಕ್ಷೆ ಕೊಡುತ್ತಿದ್ದರು. ಕನ್ನಡದ ಏಳ್ಗೆಗೆ ಬಹು ದೊಡ್ಡ ಕೊಡುಗೆ ನೀಡಿದ ಶ್ರೀಗಳು ಕನ್ನಡದ ದೇವರಾಗಿದ್ದರು ಎಂದರು.

ಎಕೆಆರ್ ದೇವಿ ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಇಲಾಖೆಯ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಮೋದ ಕರಣಂ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ಭಾರತೀಯ ಬಸವ ಬಳಗದ ಸಂಚಾಲಕ ಅಮೃತರಾವ ಪಾಟೀಲ ಗುಡ್ಡೇವಾಡಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂದಿ, ಎಂ.ವಿ.ಎಸ್.ಸುಬ್ರಹ್ಮಣ್ಯಂ, ರವೀಂದ್ರಕುಮಾರ ಭಂಟನಳ್ಳಿ ಮಾತನಾಡಿದರು.

ಮುಖರಾದ ಯಶ್ವಂತರಾಯ ಅಷ್ಠಗಿ, ಜಗದೀಶ ಮರಪಳ್ಳಿ, ಭೀಮಾಶಂಕರ ಅಂಕಲಗಿ, ಶಿಲ್ಪಾ ಜೋಶಿ, ಹಣಮಂತಪ್ರಭು, ನಾಗನ್ನಾಥ ಯಳಸಂಗಿ, ರಾಜೇಂದ್ರ ಮಾಡಬೂಳ, ವಿಜಯಾನಂದ ಬಿರಾದಾರ, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಪ್ರಭವ ಪಟ್ಟಣಕರ್, ಹೆಚ್ ಎಸ್ ಬರಗಾಲಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಚನ ಸಾಹಿತ್ಯದ ಪ್ರಚಾರ, ಶಿಕ್ಷಣ, ಕನ್ನಡ ಭಾಷೆಯನ್ನು ಕಲ್ಯಾಣ ನಾಡಿನಾದ್ಯಂತ ಪಸರಿಸುವಲ್ಲಿ ಶ್ರೀ ಡಾ. ಚನ್ನಬಸವ ಪಟ್ಟದ್ದೇವರ ಶ್ರಮ ಅಪಾರವಾಗಿದೆ. ಭಾಷಾಪ್ರೇಮಿಯಾಗಿದ್ದ ಶ್ರೀಗಳು ಸ್ವಾತಂತ್ರ್ಯಪೂರ್ವದಲ್ಲೇ ಮಹಿಳೆಯರಿಗಾಗಿ ಕನ್ನಡ ಮಾಧ್ಯಮದ ಶಾಲೆ ಆರಂಭಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. – ಡಾ. ಸಿ. ಸೋಮಶೇಖರ, ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago