ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಕಡಬೂರ್ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಭಾರತದ ಶ್ರೇಷ್ಠ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮನುಜನ್ ಅವರ ಜನ್ಮದಿನೋತ್ಸವ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ನಿಮಿತ್ತ ವಿವಿಧ ಸಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲಾ ಗಣಿತ ಸಂಘದ ಅಧ್ಯಕ್ಷರಾದ ಮನೋಜ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷರಾದ ಸಿಮ್ರನ್ ತೈಯಬ್ ಮಿಯ್ಯಾ, ಸಂಘದ ಸಂಘಟನಾ ಕಾರ್ಯಾದರ್ಶಿ ಭವಾನಿ ಮಲ್ಲಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಗುಂಡಪ್ಪ ಬಸವರಾಜ್ ಭಂಕೂರ ರಾಷ್ಟ್ರೀಯ ಗಣಿತ ದಿನದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶೇಖಶಾಹಿರಾ ಮತ್ತು ತಂಡದವರು ಪ್ರಾರ್ಥನಾ ಗೀತೆ ಮೂಲಕ ಕಾರ್ಯಕ್ರಮವನ್ನು ಒಂದಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಸೇರಿದಂತೆ ಸಿಬ್ಬಂದಿಗಳು ವಿಶೇಷ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.