ಕಲಬುರಗಿ: ಈ ಭಾಗದ ಕಲಾವಿದರನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಂಗ ಕಲಾವಿದ ಸಿದ್ದಣ್ಣ ಕೋಲ್ಹಾರ ನುಡಿದರು.
ನಗರದ ನಂದಿ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ, ಸ್ನೇಹ ಸಂಗಮ ವಿವಿದೊದ್ದೇಶ ಸೇವಾ ಸಂಘ ಹಾಗೂ ಅಮರಪ್ರಿಯ ಕಲಾ ಬಳಗದ ವತಿಯಿಂದ ರಂಗ ಕಲಾವಿದ ದಿ. ಈಶ್ವರಪ್ಪ ಎಸ್. ಪರಹತಾಬಾದ್ ಅವರಿಗೆ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಭಾಗದಲ್ಲಿ ಕಲಾವಿದರ ಕೊರತೆಯಿಲ್ಲ ತಮ್ಮ ಹೊಟ್ಟೆಪಾಡಿಗಾಗಿ ಕಲೆಯನ್ನು ಹೊರ ಹಾಕದೆ ಜೀವನಕ್ಕಾಗಿ ತ್ಯಾಗ ಮಾಡುತ್ತಿರುವುದು ವಿಷಾದನಿಯ ಎಂದು ನುಡಿದರು.
ಸಂಘದ ಅಧ್ಯಕ್ಷ ಹಣಮಂತರಾಯ ಅಟ್ಟೂರ ಮಾತನಾಡುತ್ತಾ ಕಲಾವಿದ ಈಶ್ವರಪ್ಪನವರು ದೈಹಿಕವಾಗಿ ನಮ್ಮ ಜೊತೆಯಲ್ಲಿಲ್ಲದ್ದರು ಅವರ ಆಚಾರ ವಿಚಾರಗಳು ಎಂದಿಗೂ ನಮ್ಮ ಜೊತೆಯಾಗಿರುತ್ತವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಅಮರಪ್ರಿಯ ಹಿರೇಮಠ, ಗುಂಡಣ್ಣ ಡಿಗ್ಗಿ, ರಾಜು ಹೆಬ್ಬಾಳ, ಮಲಕಾರಿ ಪೂಜಾರಿ, ಶ್ರವಣಕುಮಾರ ಮಠ, ಸಾಯಬಣ್ಣ ಬೆಳಮ್, ಬಸವರಾಜ ಜೋಗುರ, ರಾಜಕುಮಾರ ಎಸ್. ಪರಹತಾಬಾದ್, ಪ್ರಾಣೇಶ ಜೋಷಿ, ರಾಜಶೇಖರ ಪಾಟೀಲ, ಮಹೇಶ ತೇಲಕುಣಿ, ಶರಣು ಜೆ. ಪಾಟೀಲ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…