ಕಲಬುರಗಿ: ವಿದ್ಯಾರ್ಥಿ ಜೀವನ ಬಹಳ ಪ್ರಮುಖವಾಗಿರುವುದು ಈ ವಯಸ್ಸಿನಲ್ಲಿ ನಿಮ್ಮನ್ನು ನೀವು ಗೌರವಿಸಿಕೊಂಡಾಗ ಯಶಸ್ಸು ಸಾಧ್ಯ ಎಂದು ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಶ್ರೀಮತಿ ಅನುರಾಧಾ ದೇಸಾಯಿ ಅವರು ನುಡಿದರು.
ಹೈದರಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪ್ರತಿಷ್ಠಿತ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದಲ್ಲಿ 2023 – 24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ನೆರವೇರಿಸಿ ಮತನಾಡಿದರು.
ಮುಂದುವರೆದು ವಿದ್ಯಾರ್ಥಿಗಳು ತಮ್ಮ ಜೀವನದ ಗುರಿ ನಿಶ್ಚಿತ ಪಡಿಸಿಕೊಂಡು ಪರಿಶ್ರಮ ಪಟ್ಟರೆ ಯಶಸ್ಸು ನಿಶ್ಚಿತ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಹೈದರಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸೋಮನಾಥ ನಿಗ್ಗುಡಗಿ ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಪಾಲಕರಿಗೆ ಒಳ್ಳೆಯ ಮಕ್ಕಳಾಗಿ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂದು ಹೇಳಿದ್ದರು.
ಕಾಯ್ರ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎನ್. ಗಿರಿಜಾ ಶಂಕರ್ ರವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಸಂಸ್ಕಾರವು ಸಹ ಕಲಿಯುವುದು ಮುಖ್ಯ ಎಂದು ನುಡಿದರು.
ಕಾಯ್ರ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಿಸುತಿರುವುದರಿಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ವತಿಯಿಂದ ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸುವುದರ ಮೂಲಕ ಮುಂಜಾಗೃತೆ ವಹಿಸಿ ಜಾಗೃತಿ ಮೂಡಿಸಲು ಸೂಚಿಸಲಾಯಿತು.
ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ. ನಾಗೇಂದ್ರ ಮಸೂತಿ, ಉಪ ಪ್ರಾಚಾರ್ಯರಾದ ಡಾ. ವೀಣಾ ಎಚ. ಶ್ರೀಮತಿ ಉಮಾ ರೇವೂರ್ ಮತ್ತು ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀಮತಿ ಮಂಗಲಾ ಬಿರಾದಾರ ಅವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…