ಕಲಬುರಗಿ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಹೇಳಿಕೆಯನ್ನು ಖಂಡಿಸಿ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸೇನೆ ಜಿಲ್ಲಾ ಅಧ್ಯಕ್ಷ ಲಕ್ಷ್ಮೀಕಾಂತ ಸೌದಿ, ಸಿದ್ದು ಕಂದಗಲ್, ದಶರಥ ಇಂಗೋಳೆ, ಪ್ರಕಾಶ ವಾಘಮೋರೆ, ಹಣಮಂತರಾಯ ಶಹಾಪುರ, ಸುನೀಲ ರಾಠೋಡ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.