ಬಿಸಿ ಬಿಸಿ ಸುದ್ದಿ

ಮಾನವ ಬಂಡವಾಳ ನಿರ್ಮಾಣಕ್ಕೆ ವಲಸೆಗೆ ಪ್ರೋತ್ಸಾಹ ಅಗತ್ಯ

ಶಹಾಬಾದ: ನಮ್ಮ ದೇಶದಲ್ಲಿ ಜನಸಂಖ್ಯೆಯ ಹಂಚಿಕೆಯ ಪ್ರಮಾಣವನ್ನು ಗಮನಿಸಿದಾದ ಸಮ ಪ್ರಮಾಣದಲ್ಲಿ ಹಂಚಿಕೆಯಾಗಿಲ್ಲ. ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮತ್ತು ಇನ್ನೂ ಕೆಲವು ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಜನಸಂಖ್ಯೆ ಕಂಡುಬರುತ್ತದೆ. ಎಲ್ಲಾ ಜನರು ಒಂದೆಡೆ ನೆಲೆಸುವದರಿಂದ ಅಲ್ಲಿ ಉದ್ಯೋಗಗಳ ಪ್ರಮಾಣ ಕಡಿಮೆಯಾಗುತ್ತದೆ. ಆದ್ದರಿಂದ ನಿರುದ್ಯೋಗದ ಪ್ರಮಾಣ ಕಡಿಮೆಯಾಗಿ, ಮಾನವ ಬಂಡವಾಳ ನಿರ್ಮಾಣವಾಗಲು ವಲಸೆಗೆ ಪ್ರೋತ್ಸಾಹ ನೀಡಬೇಕು ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ.ಪಾಟೀಲ ಹೇಳಿದರು.

ನಗರದ ಸಮೀಪದ ಝಾಪೂರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ವಲಸೆ ದಿನಾಚರಣೆ’ಯಲ್ಲಿ ಅವರು ಮಾತನಾಡುತ್ತಿದ್ದರು.

ಜನರು ಉದ್ಯೋಗ ಮತ್ತು ಹೆಚ್ಚಿನ ವೇತನಗಳನ್ನು ಅರಸಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಲಸೆ ಹೋಗುತ್ತಾರೆ. ಎಂಜಿನಿಯರರು, ವೈದ್ಯರು, ವ್ಯವಸ್ಥಾಪಕರಂತಹ ತಾಂತ್ರಿಕ ಅರ್ಹತೆಯುಳ್ಳ ವ್ಯಕ್ತಿಗಳು ಹೆಚ್ಚಿನ ವೇತನ ಪಡೆಯುವುದಕ್ಕಾಗಿ ಇತೆರ ದೇಶಗಳಿಗೆ ವಲಸೆ ಹೋಗುತ್ತಾರೆ. ಆಂತರಿಕ ಮತ್ತು ಬಾಹ್ಯ ವಲಸೆಗಳೆರಡೂ ಸಾರಿಗೆ ವೆಚ್ಚ, ವಲಸೆ ಹೋದ ಪ್ರದೇಶಳಲ್ಲಿನ ಅಧಿಕ ಜೀವನವೆಚ್ಚ ಮತ್ತು ಅಪರಿಚಿ ಸಾಮಾಜಿಕ-ಸಾಂಸ್ಕøತಿಕ ಸನ್ನಿವೇಶಗಳಲ್ಲಿ ಬದುಕುವ ಮಾನಸಿಕ ವೆಚ್ಚಗಳನ್ನು ಒಳಗೊಂಡಿದೆ. ಹೊಸ ಸ್ಥಳಗಳಲ್ಲಿನ ಅಧಿಕಗೊಂಡ ಗಳಿಕೆಯು ವಲಸೆಯ ವೆಚ್ಚಗಳಿಗಿಂತ ಹೆಚ್ಚಾಗಿರುತ್ತದೆ. ಆದುದರಿಂದ ವಲಸೆ ಮೇಲಿನ ವೆಚ್ಚ ಸಹ ಮಾನವ ಬಂಡವಾಳ ನಿರ್ಮಾಣದ ಮೂಲವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ದೇವೇಂದ್ರಪ್ಪ ಗಣಮುಖಿ, ನಾಗನಗೌಡ ಪಾಟೀಲ ವೈಜಾಪುರ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಿವಯೋಗಪ್ಪ ಬಿರಾದಾರ, ಸುರೇಶ ಮಾಂಗ್, ಶಿಕ್ಷಕರಾದ ಶಾರದಬಾಯಿ, ಶಾಂತಾಬಾಯಿ, ವೀರವ್ವ ಹಿರೆಕೆನ್ನೂರ್, ಮಂಜುಳಾ ಮೇಲಿನಮನಿ, ಗ್ರಾಮಸ್ಥ ಕೃಷ್ಣ ನಾಯ್ಕೊಡಿ ಹಾಗೂ ಗ್ರಾಮಸ್ಥರು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

4 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

4 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

4 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago