ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ. 29 ಮತ್ತು 30ರಂದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ರಾಜ್ಯ ಮಟ್ಟದ 3ನೇ ವೈಜ್ಞಾನಿಕ ರಾಜ್ಯ ಸಮ್ಮೇಳನ ನಡೆಯಲಿದೆ.
ರಾಜ್ಯ ಮಟ್ಟದ ಎಚ್.ಎನ್. ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯಿಂದ ಆಯ್ಕೆಯಾಗಿರುವ ಪ್ರೊ. ಆರ್.ಕೆ. ಹುಡಗಿ ಅವರಿಗೆ ಸಮ್ಮೇಳನಕ್ಕೆ ಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಆಮಂತ್ರಣ ಪತ್ರಿಕೆ ನೀಡಿ ಅಧಿಕೃತ ಆಹ್ವಾನ ನೀಡಲಾಯಿತು.
ಆಹ್ವಾನ ಸ್ವೀಕರಿಸಿ ಮಾತನಾಡಿದ ಪ್ರೊ. ಆರ್.ಕೆ. ಹುಡಗಿಯವರು, ಸಮಾಜದಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆ ಬಿತ್ತುವ ಕಾರ್ಯ ಮಾಡುತ್ತಿರುವ ಡಾ. ಹುಲಿಕಲ್ ನಟರಾಜ ನೇತೃತ್ವದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಣ್ಣಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ, ರಾಜ್ಯ ಸಮಿತಿ ಸದಸ್ಯ ಶರಣಬಸವ ಕಲ್ಲಾ, ಜಿಲ್ಲಾ ಸಂಚಾಲಕ ಪರಮೇಶ್ವರ ಶೆಟಕಾರ, ಧನರಾಜ ತಾಂದ್ಲೆ, ಶರಣಬಸಪ್ಪ ನಾಗೂರ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…