ಕೋವಿಡ್-19ರ ಉಪ ತಳಿ ಜೆ.ಎನ್-1 ಪ್ರಕರಣ ಹೆಚ್ಚಳ‌: ಸುರಕ್ಷಾ ನಿಯಮ ಪಾಲಿಸುವಂತೆ ಮನವಿ

0
34

ಕಲಬುರಗಿ,ಡಿ.25: ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19ನ ಉಪತಳಿ ಜೆ.ಎನ್-1 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಿಕೆ, ಅಗಾಗ ಕೈಗಳನ್ನು ಸೋಪ್ ನಿಂದ ಸ್ವಚ್ಛವಾಗಿ ತೊಳೆದುಕೊಳ್ಳುವುದು ಸೇರಿದಂತೆ ಕೋವಿಡ್ ಸುರಕ್ಷಾ ನಿಯಮ ಪಾಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಸ್ತುತ ಚಳಿಗಾಲದ ಹವಾಮಾನ, ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಕರಣಗಳು ಹೆಚ್ಚಾಗುವ ಸಂಭವ ಇರುವ ಕಾರಣ ಎಚ್ಚರಿಕೆ ವಹಿಸುವಂತೆ ಕರೆ ನೀಡಿದ್ದಾರೆ.

Contact Your\'s Advertisement; 9902492681

ಜಿಲ್ಲೆಯಲ್ಲಿ 60 ವರ್ಷ ಹಾಗೂ ಮೇಲ್ಪಟ್ಟ ಹಿರಿಯ ನಾಗರೀಕರು, ಕಿಡ್ನಿ, ಹೃದಯ, ಲಿವರ್ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು, ವಿಶೇಷವಾಗಿ ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕೆಂದು ಸಲಹೆ‌ ನೀಡಿರುವ ಅವರು, ಸಾರ್ವಜನಿಕರು ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಹತ್ತಿರದ ಜಿಲ್ಲಾ-ತಾಲೂಕ ಆಸ್ಪತ್ರೆಗಳಿಗೆ ಭೇಟಿ ನೀಡಿ ಉಚಿತ ಪರೀಕ್ಷೆ ಜೊತೆಗೆ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರೀಕರು, ದುರ್ಬಲ ವ್ಯಕ್ತಿಗಳನ್ನು ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡಬೇಕು ಎಂದಿದ್ದಾರೆ.

ಅಂತರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ, ವಿಮಾನದೊಳಗೆ ಮಾಸ್ಕ್ ‌ಧರಿಸಬೇಕು. ಗಾಳಿ ಬೆಳಕು ಇಲ್ಲದ, ಜನದಟ್ಟಣೆ ಪ್ರದೇಶದಿಂದ ದೂರ ಇರುವುದು ಒಳ್ಳೆಯದು‌ ಎಂದಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here