ಕಲಬುರಗಿ: ಅಂಗವಿಕಲರಿಗೆ ನೀಡಲಾಗುತ್ತಿರುವ ಮಶಾಸನ ವೇತನವನ್ನು ರೂ. 6000ವರೆಗೆ ಹೆಚ್ಚಿಸಲು ಸರಕಾರಕ್ಕೆ ಶೀಫಾರಸು ಮಾಡಬೇಕೆಂದು ನ್ಯೂ ಲೈಫ್ ಅಂಗವಿಕಲರ ಮಹಿಳೆಯರ ಸಂಘ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಅವರಿಗೆ ಮನವಿ ಪತ್ರ ಸಲ್ಲಿಸಿ ರಾಜ್ಯ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಮಂಗಳವಾರ ನಗರದ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಅಧಿಕಾರಿಗಳಿ ಮನವಿ ಸಲ್ಲಿಸಿದ ಬಳಿಕ ಶಾಸಕಿ ಕನೀಜ್ ಫಾತೀಮಾ ಅವರ ನಿವಾಸಕ್ಕೆ ನಿಯೋಗದ ಸದಸ್ಯರು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಯಿಂದ ಈಗಾಗಲೇ. ರೂ. 1400 ಮಶಾಸನ ವೇತನ ಯಾವುದಕ್ಕೂಸಾಲುತ್ತಿಲ್ಲ. ದಿನ ಬಳಕೆಯ ಸಮಾನುಗಳ ದರ ಏರಿಕೆಯಿಂದ ಅಂಗವಿಕಲರು ಇತರರ ಮೇಲೆ ಅವಲಂಭಿತರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ವಾಲಂಬನೆ ಮತ್ತು ಘನತೆಯಿಂದ ಬದುಕುಲ ಮಶಾಸನ ಕೇವಲ ಅನುಕಂಪಕ್ಕೆ ಸಿಮಿತಗೊಂಡಿರುವಂತೆ ಅನಿಸಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಶಾಸಕಿ ಪುತ್ರ ಫರಾಜ್ ಉಲ್ ಇಸ್ಲಾಂ ಅವರು ಮನವಿ ಸ್ವೀಕರಿಸಿ ಮಾತನಾಡಿದ ಅವರು ಬೇಡಿಕೆಗಳು ಸರಕಾರದ ಗಮನಕ್ಕೆ ತರುವ ಬಗ್ಗೆ ಶಾಸಕರಿಗೆ ತಿಳಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಹೆಬೂಬ್ ಬಿ, ಉಪಾಧ್ಯಕ್ಷರಾದ ಶಕೀಲಾ, ಕಾರ್ಯದರ್ಶಿ ಶಮಿಮ್ ಬೇಗಂ ಜಗದೇವಿ ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…