ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡುರುವ ಘಟನೆ ನಗರದ ಎಂ.ಎಸ್.ಕಿ ಮೀಲ್ ಮಿರ್ಚಿ ಗೊದಾಮ್ ಹತ್ತಿರ ನಡೆದಿದೆ.
ಮೃತನ ಗುರುತು ಪತ್ತೆಯಾಗಿಲ್ಲ, (25) ವರ್ಷದ ಯುವಕ ಎಂದು ಅಂದಾಜಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ಮಾಡಿ ಪರಾರಿಯಾದ ದುಷ್ಕರ್ಮಿಗಳು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಈ ಕುರಿತು ರಾಘವೇಂದ್ರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದೆ. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.