- ಎಂ.ಡಿ ಮಶಾಖ
ಚಿತ್ತಾಪುರ; ತಾಲೂಕಿನ ಕೊಂಚೂರ್ ಗ್ರಾಮದಲ್ಲಿ ಹನುಮಾನ ಜಾತ್ರಾ ಮಹೋತ್ಸವದ ಪ್ರಯುಕ್ತ ಭವ್ಯ ರಥೋತ್ಸವ ಜರುಗಿತು.
ಇದೇ ವೆಳೆ ಭಕ್ತರು ಉತ್ತತ್ತಿ, ಬಾಳೆಹಣ್ಣು ರಥದ ಮೇಲೆ ಎಸೆಯುವುದರ ಮೂಲಕ ಭಕ್ತಿ ಸಮರ್ಪಿಸಿದರು. ಸಿದ್ಧಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಗಜವಾಹನ ಉತ್ಸವ ಜರುಗಿತು.
ಈ ಸಂದರ್ಭದಲ್ಲಿ ವಿವಿಧ ಮಠಗಳ ಮಠಾಧೀಶರು ಸೇರಿದಂತೆ ಅನೇಕ ಮುಖಂಡರು ಹಾಗೂ ಸಾವಿರಾರು ಭಕ್ತರು ಇದ್ದರು.