ಚಿತ್ತಾಪುರ; ಕಾಳಗಿ, ಶಹಾಬಾದ ತಾಲೂಕಿನಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ ಕುಮಾರ ಮಾನಕರ್ ತಿಳಿಸಿದ್ದಾರೆ.
ಕೃಷಿಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿದ್ದು, ಕೃಷಿ ಹೊಂಡ, ಕ್ಷೇತ್ರ ಬದು, ಪಂಪ್‌ಸೆಟ್, ಲಘು ನೀರಾವರಿ ಘಟಕ ಹಾಗೂ ತಂತಿ ಬೇಲಿ ಒಳಗೊಂಡಿರುತ್ತದೆ. ರೈತರು ಎಲ್ಲ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು, ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಅಥವಾ ಇತರೆ ಯೋಜನೆಯಗಳಡಿ ಕೃಷಿ ಹೊಂಡ ನಿರ್ಮಿಸಿಕೊಂಡ ರೈತರನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಿದ್ದಾರೆ.
ನಿಗದಿಪಡಿಸಿದ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಡಿ.31ರೊಳಗಾಗಿ ಸಂಬಂಧಿಸಿದ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಗುರಿಗಿಂತಲೂ ಹೆಚ್ಚಿನ ಪ್ರಮಾಣದ ಅರ್ಜಿ ಸ್ವೀಕರಿಸಿದಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಿದ್ದಾರೆ.