ಬಿಸಿ ಬಿಸಿ ಸುದ್ದಿ

ಗೃಹಲಕ್ಷ್ಮೀ ಯೋಜನೆ ಕಟ್ಟುನಿಟ್ಟಾಗಿ ತಲುಪುವಂತೆ ಮಾಡಲು ವಿಶೇಷ ಶಿಬಿರ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಗೃಹಲಕ್ಷ್ಮಿ ಯೋಜನೆಯ ಲಾಭ ಎಲ್ಲಾ ಫಲಾನುಭವಿಗಳಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ” ನಾಡಿನ ಮಹಿಳೆಯರ ಆರ್ಥಿಕ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಾ, ಜನಪರ ಆಡಳಿತದ ಮೂಲಕ ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭವನ್ನು ಮತ್ತಷ್ಟು ಜನರಿಗೆ ತಲುಪುವಂತೆ ಮಾಡುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಶೇಷ ಶಿಬಿರವನ್ನು ಆಯೋಜಿಸಿದೆ ”

” ರಾಜ್ಯದ ಎಲ್ಲಾ 5,000ಕ್ಕೂ ಹೆಚ್ಚು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏಕಕಾಲದಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ

  • -ಆಧಾರ್ ಜೋಡಣೆ,
  • – ಬ್ಯಾಂಕಿಗೆ ಸಂಬಂಧಿಸಿದ ತೊಂದರೆ,
  • – ಇ-ಕೆವೈಸಿ ಅಪ್ಡೆಟ್,
  • – ಹೊಸ ಬ್ಯಾಂಕ್ ಖಾತೆ ಸಂಪರ್ಕ ಸೇರಿದಂತೆ

ಹಲವು ಅಡೆತಡೆಗಳನ್ನು ನಿವಾರಿಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ” ಎಂದು ಖರ್ಗೆ ಹೇಳಿದ್ದಾರೆ. ಸಾರ್ವಜನಿಕರು ಈ ಅಭಿಯಾನದ ಸಂಪೂರ್ಣ ಪ್ರಯೋಜನ ಪಡೆಯಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

emedialine

Recent Posts

ಎಂ.ಎಸ್ ಇರಾಣಿ ವಿದ್ಯಾರ್ಥಿಗೆ ದ್ವೀತಿಯ ಸ್ಥಾನ

ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…

3 hours ago

ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮ

ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…

3 hours ago

ಸ್ಲಂ ಜನಾಂದೋಲನ ಜಿಲ್ಲಾ ಘಟಕದಿಂದ ಹಕ್ಕು ಪತ್ರ ನೊಂದಣಿ ಖಾತ ಪ್ರತಿ ವಿತರಣೆ

ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ  ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ  ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…

3 hours ago

ಸಂವಿಧಾನ ದಿನಾಚರಣೆ

ಕಲಬುರಗಿ : ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿಯಲ್ಲಿ ಎನ್.ಎಸ್.ಎಸ್, ರೆಡ್‍ಕ್ರಾಸ್, ಸ್ಕೌಟ್ಸ್ ಆಂಡ್ ಗೈಡ್ಸ್, ಐ.ಕ್ಯೂ.ಎ.ಸಿ ಮತ್ತು ಸಾಂಸ್ಕøತಿಕ ಘಟಕಗಳ…

3 hours ago

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪೆÇೀಲೀಸ್ ಇಲಾಖೆಗೆ ಅಭಿನಂದನೆ

ಕಲಬುರಗಿ; ಶಿಶು ಮಗುವಿಗೆ ಅಪಹರಣಕಾರರನ್ನು ಬಂಧಿಸಿದ ಕಲಬುರಗಿ ಪೆÇೀಲೀಸ್ ಇಲಾಖೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಅಭಿನಂದನೆ ವ್ಯಕ್ತಪಡಿಸಿದೆ.…

3 hours ago

ಲೋಕೋಪಯೋಗಿ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆಯಿಂದ ಧರಣಿ ಸತ್ಯಾಗ್ರಹ

ಕಲಬುರಗಿ; ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಅಫಜಲಪೂರ, ಸೇಡಂ, ಆಳಂದ, ಚಿಂಚೋಳಿ  ತಾಲೂಕಿನಲ್ಲಿ ಜಂಗಲ್ ಕಟಿಂಗ್ ಹಾಗೂ ಮೆಂಟನೆನ್ಸ್…

3 hours ago