ಕಲಬುರಗಿ: ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ವೇದಿಕೆಯ ಜಂಟಿ ಆಶ್ರಯದಲ್ಲಿ ವಚನ ದಿನಾಚರಣೆ ಹಾಗೂ ಲಿಂಗೈಕ್ಯ ಸಿದ್ದಣ್ಣ ಮೇಳಕುಂದಿ ಸ್ಮರಣಾರ್ಥ “ವಚನ ಸಾಹಿತ್ಯ ಮತ್ತು ಮೂಢನಂಬಿಕೆಗಳು” ವಿಶೇಷ ಉಪನ್ಯಾಸ ಕಾರ್ಯಕ್ರಮ ನಾಳೆ (ಸೆ.4) ಬೆಳಗ್ಗೆ 10.30 ಕ್ಕೆ ಕಲಬುರಗಿ ನಗರದ ಮಹಾತ್ಮಾ ಬಸವೇಶ್ವರ ಬಡಾವಣೆಯಲ್ಲಿರುವ ವಿಶಾಲ ಪದವಿಪೂರ್ವ ಕಾಲೇಜಿನ ಪ್ರಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಡಾ.ಶರಣಬಸಪ್ಪ ವಡ್ಡನಕೇರಿ, ಯುವ ಅಧ್ಯಕ್ಷ ಶಿವರಾಜ ಅಂಡಗಿ ತಿಳಿಸಿದ್ದಾರೆ.
ಇಂದಿನ ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಮುಂದುವರಿದರೂ ಮೂಢನಂಬಿಕೆಗಳು ಜೀವಂತವಾಗಿಟ್ಟುಕೊಂಡು ಬರುತ್ತಿರುವುದು ದುರಂತವೇ ಸರಿ. ಮೂಢನಂಬಿಕೆ, ಕಂದಾಚಾರ, ಅನಿಷ್ಟ ಪದ್ಧತಿಗಳ ಮುಕ್ತವಾದ ಸಮಾಜ ನಿರ್ಮಾಣದ ಕನಸನ್ನು ಹೊತ್ತ ಹನ್ನೇರಡನೇ ಶತಮಾನದ ಬಸವಾದಿ ಶರಣರ ಆಶಯವನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಪರಿಷತ್ತು ಇಂಥ ಕಾರ್ಯಕ್ರಮಗಳ ಮೂಲಕ ಮಾಡುತ್ತಿದೆ ಎಂದು ಅವರು ವಿವರಿಸಿದ್ದಾರೆ.
ನಾಡಿನ ಶ್ರೇಷ್ಠ ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಕಾರ್ಯಕ್ರಮ ಉದ್ಘಾಟಿಸಿ, ಉಪನ್ಯಾಸ ನೀಡಲಿದ್ದು, ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಕುಪೇಂದ್ರ ಪಾಟೀಲ, ಕದಳಿ ವೇದಿಕೆಯ ಜಿಲ್ಲಾ ಸಂಚಾಲಕಿ ಆಶಾದೇವಿ ಖೂಬಾ, ಖ್ಯಾತ ನರರೋಗ ತಜ್ಞ ಡಾ.ಸತೀಶ ಮೇಳಕುಂದಿ ಉಪಸ್ಥಿತರಿರುವರು. ಕಾಲೇಜಿನ ಪ್ರಾಚಾರ್ಯ ವೀರೇಶ ಕಲಕೋರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…