- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ಪಟ್ಟಣದಲ್ಲಿ ಕುರುಬ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘದಿಂದ ಕುರಿಗಳ ಮೂಲಕ ಬೃಹತ್ ಪ್ರತಿಭಟನೆ ಮಾಡಲಾಯಿತು.
ಪಟ್ಟಣದ ಕನಕ ಭವನದಿಂದ ಪ್ರತಿಭಟನೆ ನಡೆಸಿ ಲಾಡ್ಜೀಂಗ್ ಕ್ರಾಸ್ ಹತ್ತಿರ ಟೈರ್ ಸುಟ್ಟು, ಮಾನವ ಸರಪಳಿ ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು.
ನಂತರ ತಹಸೀಲ್ ಕಚೇರಿಗೆ ತೆರಳಿ ತಹಶೀಲ್ದಾರ್ ಸೈಯದ್ ಷಾಷಾವಲಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುರುಬ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ ಹೊಸ್ಸಳ್ಳಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ, ಯಲ್ಲಾಲಿಂಗ ಪೂಜಾರಿ, ಸಿದ್ದು ಪೂಜಾರಿ, ಬಸವರಾಜ ಕೇಶ್ವಾರ್, ಮಲ್ಲಿಕಾರ್ಜುನ ಪೂಜಾರಿ, ಮಹೇಶ ಧರಿ, ಸಂತೋಷ ಪೂಜಾರಿ ಸೇರಿದಂತೆ ಅನೇಕರು ಹಾಜರಿದ್ದರು.