ಕಲಬುರಗಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ನೇಮಕಗೊಂಡ ಅಪ್ಪು ಕಣಕಿ, ಉಪಾಧ್ಯಕ್ಷ ರಾಜಕುಮಾರ ಕೋಟೆ ಅವರು ಮಂಗಳವಾರದಂದು ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ಅಧಿಕಾರವನ್ನು ಸ್ವೀಕರಿಸಿದರು.
ಅಧ್ಯಕ್ಷ ಅಪ್ಪು ಕಣಕಿ ಮಾತನಾಡಿ, ಈ ಭಾಗದ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣಬದ್ಧರಿದ್ದೇವೆ ಎಂದು ಹೇಳಿದ ಅವರು, ತಮ್ಮ ನೇಮಕಕ್ಕೆ ಕಾರಣೀಕರ್ತರಾದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಮರೆಯಲಿಲ್ಲ.
ಉಪಾಧ್ಯಕ್ಷ ರಾಜಕುಮಾರ ಕೋಟೆ ಮಾತನಾಡಿ, ರೈತರ ಅಭಿವೃದ್ಧಿ ಜತೆಗೆ ಎಪಿಎಂಸಿ ಗೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದ ಅವರು, ನೇಮಕಕ್ಕೆ ಸಹಕರಿಸಿದ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ ಕೃತಜ್ಞತೆಗಳು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಹಾಜರಿದ್ದ ಕಲಬುರಗಿಯ ಸಾಂಸ್ಕೃತಿಕ ಬಳಗದ ಪ್ರಮುಖರಾದ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಶಿವರಾಜ ಅಂಡಗಿ, ಪರಮೇಶ್ವರ ಶಟಕಾರ, ಪ್ರಸನ್ನ ವಾಂಜರಖೇಡೆ, ಸತೀಶ ಸಜ್ಜನ್, ಶಿವಾನಂದ ಮಠಪತಿ, ಎಸ್.ಎಂ.ಪಟ್ಟಣಕರ್, ಶಿವಶರಣ ಕುಸನೂರ, ಬಿ.ಎಂ.ಪಾಟೀಲ ಕಲ್ಲೂರ ಸೇರಿದಂತೆ ಅನೇಕರು ಅವರನ್ನು ವಿಶೇಷವಾಗಿ ಗುಲಾಬಿ ಹೂ ಗಿಡ ನೀಡಿ ಗೌರವಿಸಿದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…