ಬಿಸಿ ಬಿಸಿ ಸುದ್ದಿ

‘ಕುವೆಂಪು ಅವರ ಚಿಂತನೆಗಳಲ್ಲಿ ವಿಶ್ವಮಾನವ ಸಂದೇಶ’; ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ: ರಾಷ್ಟ್ರಕವಿ ಕುವೆಂಪು ಅವರು ತಮ್ಮ ಬರಹದ ಮೂಲಕ ವಿಶ್ವವನ್ನು ಪ್ರೀತಿಸುವುದನ್ನು ಕಲಿಸಿಕೊಟ್ಟವರು ಮತ್ತು ಎಲ್ಲರನ್ನೂ ಒಮದೆಡೆಗೆ ತರಲು ಶ್ರಮಿಸಿದ ಅವರು, ಜನರಲ್ಲಿನ ಅಂಧ ವಿಶ್ವಾಸವನ್ನು ಬಿಡಿಸಿ ವೈಚಾರಿಕತೆಯನ್ನು ಬೆಳೆಸಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ಕನ್ನಡ ನಾಡಿಗೆ ಮೊದಲ ಜ್ಞಾನಪೀಠ ಪುರಸ್ಕಾರವನ್ನು ತಂದು ಕೊಟ್ಟ ವಿಶ್ವಮಾನವ ಸಂದೇಶ ಸಾರಿದ ಜಗದ ಕವಿ-ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ `ಕುವೆಂಪು ಅವರ ಚಿಂತನೆಗಳಲ್ಲಿ ವಿಶ್ವಮಾನವ ಸಂದೇಶ’ ವಿಶೇಷ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿ ಮಾತನಾಡಿದ ಅವರು, ಜಗದ ಕವಿಯಾಗಿರುವ ಕುವೆಂಪು ಅವರ ವಿಚಾರಧಾರೆಯಲ್ಲಿ ಸಾಮ್ಯತೆ ಇದೆ. ಜಾತಿ, ಧರ್ಮ, ಭಾಷೆ, ವರ್ಣ ಮೀರಿದ ವಿಶ್ವಮಾನವನ ಪರಿಕಲ್ಪನೆ ಕಟ್ಟಿಕೊಟ್ಟಿದ್ದಾರೆ ಎಂದರು.

ಮಹಿಳಾ ಮುಖಂಡರಾದ ಭಾಗೀರಥಿ ಗುನ್ನಾಪೂರ, ಜ್ಯೋತಿ ಮರಗೋಳ, ಮಾಜಿ ಉಪ ಮೇಯರ್ ನಂದಕುಮಾರ ಮಾಲಿಪಾಟೀಲ, ಹೋರಾಟಗಾರ ಎಸ್ ಜಿ ಭಾರತಿ, ಶ್ರೀಕಾಂತ ಪಾಟೀಲ ತಿಳಗೂಳ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಗಳಾದ ಶಿವರಾಜ ಎಸ್ ಅಂಡಗಿ, ಯಶ್ವಂತರಾಯ ಅಷ್ಠಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪ್ರಮುಖರಾದ ರಾಜೇಂದ್ರ ಮಾಡಬೂಳ, ಜ್ಯೋತಿ ಕೋಟನೂರ, ನಾಗನ್ನಾಥ ಯಳಸಂಗಿ ನಿಂಬರ್ಗಾ, ನರಸಿಂಗರಾವ ಹೇಮನೂರ, ಚಂದ್ರಕಾಂತ ಸುರನ್, ಸಂತೋಷ ಕುಡಳ್ಳಿ, ಮಂಜುನಾಥ ಕಂಬಾಳಿಮಠ, ಶಿವಾನಂದ ಮಠಪತಿ, ಸೋಮಶೇಖರಯ್ಯಾ ಹೊಸಮಠ, ಶಕುಂತಲಾ ಪಾಟೀಲ ಜಾವಳಿ, ಶ್ರೀದೇವಿ ಕೋರೆ,. ಹನುಮಂತಪ್ರಭು, ಶಿವಶರಣ ಪರಪ್ಪಗೋಳ, ಶ್ಯಾಮಸುಂದರ ಬಿ., ಎಚ್ ಎಸ್ ಬರಗಾಲಿ, ಉಮೇಶ ಕೋಟನೂರ, ವಿಠ್ಠಲರಾವ ಎಲ್ ಬಿ., ಚಂದ್ರಸೇಖರ ಮ್ಯಾಳಗಿ, ರಾಮಚಂದ್ರ ಬೆಲ್ಲದ್, ಸಾಗರ ಕೆ ನಂದಿ, ಭೀಮಾಶಂಕರ ಅಂಕಲಗಿ, ಶಿವಕುಮಾರ, ದಿನೇಶ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 hour ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

1 hour ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

1 hour ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

1 hour ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

1 hour ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

1 hour ago