ವಾಡಿ: ಕರ್ನಾಟಕ ರಾಜ್ಯ ಸರಕಾರಿ ಅಂಗವಿಕಲ ನೌಕರರ ಸಂಘದ ವತಿಯಿಂದ ಡಿ.31 ರಂದು ಬೆಳಗ್ಗೆ 10:30ಕ್ಕೆ ಕಲಬುರಗಿ ನಗರದ ಎಸ್‍ಎಂ ಪಂಡೀತ್ ರಂಗ ಮಂದಿರಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಮತ್ತು ಜಿಲ್ಲಾ ಸಮ್ಮೇಳನ ಏರ್ಪಡಿಸಲಾಗಿದ್ದು, ಚಿತ್ತಾಪುರ ತಾಲೂಕಿನ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸರಕಾರಿ ಅಂಗವಿಕಲರ ಸಂಘದ ಚಿತ್ತಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶಕುಮಾರ ಕುಲಕರ್ಣಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸುರೇಶಕುಮಾರ ಕುಲಕರ್ಣಿ, ಸಂಘದ ವತಿಯಿಂದ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ವಿಶೇಷ ಕಾರ್ಯಾಗಾರ ಏರ್ಪಡಿಸಲಾಗಿದ್ದರಿಂದ ಸರ್ಕಾರದ ವಿವಿಧ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಸಂಘದ ವತಿಯಿಂದಲೇ ಸ್ಪೂರ್ತಿ ಸ್ಮರಣ ಸಂಚಿಕೆ ಬಿಡುಗಡೆಯಾಗುತ್ತಿದೆ. ನಾಡಿನ ಮುಖ್ಯಮಂತ್ರಿಗಳು ಸೇರಿದಂತೆ ಮಂತ್ರಿಗಳು ಹಾಗೂ ಶಾಸಕರು ಪಾಲ್ಗೊಳ್ಳುತ್ತಿರುವ ಬ್ರಹತ್ ಸಮಾರಂಭವನ್ನು ಯಶಸ್ವಿಗೊಳಿಸುವ ಜವಾಬ್ದಾರಿ ಪ್ರತಿಯೊಬ್ಬ ಸರ್ಕಾರಿ ಸೇವೆಯ ವಿಲಕಚೇತನರದ್ದಾಗಿದೆ.
ಸಂಘದ ಸದಸ್ಯರು ಒಗ್ಗಟ್ಟು ಪ್ರದರ್ಶಿಸುವ ಈ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…