LPG GAS E-KYC ಕುರಿತು ಇಲ್ಲದೆ ಸ್ಪಷ್ಟ ಮಾಹಿತಿ: ಸುಳ್ಳು ವಂದತಿಗೆ ಇಲಾಖೆ ಸ್ಪಷ್ಟೀಕರಣ

0
286

ಕಲಬುರಗಿ; 2023ರ ಡಿಸೆಂಬರ್ 31 ರೊಳಗಾಗಿ ಎಲ್.ಪಿ.ಜಿ. ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಂಬಂಧಿಸಿದಂತೆ ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಈ ಕೆಳಕಂಡಂತೆ ಸ್ಪಷ್ಟೀಕರಣ ನೀಡಿದ್ದಾರೆ.

ಎಲ್.ಪಿ.ಜಿ. ಇ-ಕೆವೈಸಿ ಮಾಡಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ಸಮಯದಲ್ಲಿ ಇ-ಕೆವೈಸಿ ಮಾಡಿಸಬಹುದಾಗಿರುತ್ತದೆ. ಇ-ಕೆವೈಸಿ ಪ್ರಕ್ರಿಯೆಯು ಉಚಿತವಾಗಿರುತ್ತದೆ. ದಿನಾಂಕ 31-12-2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಬೇಕು ಎಂಬುವುದರ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು  ಅವರು  ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here