ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನಿಗೆ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದ ಘಟನೆ ನಗರದ ಎಂ.ಎಸ್.ಕೆ. ಮಿಲ್ ವರ್ತುಲ ರಸ್ತೆಯಲ್ಲಿನ ಮಿಸಬಾ ನಗರದ ಮಿರ್ಚಿ ಗೋದಾಮಿನ ಬಳಿ ವರದಿಯಾಗಿದೆ.
ಮೃತನಿಗೆ ಮದಿನಾ ಕಾಲೋನಿಯ ಶೇಖ್ ಶಫಿಉಲ್ಲಾ ರೆಹಮಾನ್ ತಂದೆ ಶೇಖ್ ಅಮ್ಜದ್ (25) ಎಂದು ಗುರುತಿಸಲಾಗಿದೆ. ಯುವಕನ ಮೇಲೆ ಹಂತಕರು ದಾಳಿ ಮಾಡಿದ್ದಾರೆ. ಹೀಗಾಗಿ ಗಂಟಲು, ತಲೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವದಿಂದ ಸ್ಥಳದಲ್ಲಿಯೇ ಯುವಕ ಪ್ರಾಣ ಬಿಟ್ಟಿದ್ದಾನೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಹಳೆಯ ದ್ವೇಷವೇ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಕಳೆದ ಏಪ್ರಿಲ್ ೨೪ರಂದು ರಾತ್ರಿ ೧೦-೩೦ರ ಸುಮಾರಿಗೆ ಫಯಾಜ್ ಶೇಖ್ ತಂದೆ ಫರ್ನಿಶೇಖ್ ಅಲಿಯಾಸ್ ಹರೂನ್ ಶೇಖ್ ಎಂಬಾತನ ಕೊಲೆಯಾಗಿತ್ತು. ಅಲ್ಲದೇ ಆತನೊಂದಿಗಿದ್ದ ನಾಲ್ವರ ಮೇಲೆಯೂ ಹಲ್ಲೆ ಆಗಿತ್ತು. ಈ ಸಂಬಂಧ ಗುಲಬರ್ಗಾ ವಿಶ್ವವಿದ್ಯಾಲಯ ಪೋಲಿಸ್ ಠಾಣೆಯಲ್ಲಿ ಹತ್ಯೆಗೆ ಒಳಗಾದ ಮದಿನಾ ಕಾಲೋನಿಯ ಶೇಖ್ ಶಫಿ ಉಲ್ಲಾ ರೆಹಮಾನ್ ತಂದೆ ಶೇಖ್ ಅಮಜದ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೀಗಾಗಿ ಹಳೆದ ದ್ವೇಷವೇ ಕೊಲೆಗೆ ಕಾರಣ ಆಗಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ನೂತನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್, ಡಿಸಿಪಿ ಕಿಶೋರ್‌ಬಾಬು, ರಾಘವೇಂದ್ರ ನಗರ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ರಾಘವೇಂದ್ರ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…