ಕಲಬುರಗಿ: ಮುಂದಿನ 5 ವರ್ಷಗಳ ಕಾಲ ನಿಮ್ಮ ಸೇವಕನಾಗಿ ಕೆಲಸ ಮಾಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಮತದಾರರಲ್ಲಿ ಸಾಷ್ಟಾಂಗ ನಮಸ್ಕಾರ ಮಾಡಿ ವಿನಂತಿಸಿದ್ದಾರೆ.
ಅವರು ನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ನೀವು ಯಾರಿಗೂ ಹೆದರದೇ ನನಗೆ ಮತ ಹಾಕಿ ಎಂದು ವೇದಿಕೆ ಮೇಲೆ ಸಾಷ್ಟಾಂಗ ನಮಸ್ಕಾರ ಮಾಡಿ ಮತದಾರರಿಗೆ ಮನವಿ ಮಾಡಿದರು.
ಮಲ್ಲಿಕಾರ್ಜುನ ಖರ್ಗೆ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತಿದ್ದು, ಉದ್ಯೋಗ ಸೃಷ್ಟಿಗಾಗಿ ಏನು ಮಾಡಿದ್ದಾರೆ? ಜಿಲ್ಲೆಯಲ್ಲಿರುವ ಅನೇಕ ಕಾರ್ಖಾನೆಗಳು ಬಂದ್ ಆಗಿವೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರದಲ್ಲಿಯೇ ಅತಿ ಹೆಚ್ಚು ಮಕ್ಕಳು ಸಾವನಪ್ಪಿದ್ದಾರೆ ಎಂದು ಟೀಕಿಸಿ, ಮಲ್ಲಿಕಾರ್ಜುನ ಖರ್ಗೆ ಅವರು 371(ಜೆ) ಜಾರಿಗಾಗಿ ಒಂದೇ ಒಂದು ಪತ್ರ ಬರೆದಿಲ್ಲ. 371(ಜೆ) ಈಗ ಮಾತನಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದರು.
ನಾನು ಹಣ ಕೊಟ್ಟು ಜನರನ್ನು ಪ್ರಚಾರಕ್ಕೆ ಕರೆಸಿಲ್ಲ. ಪ್ರಿಯಾಂಕ್ ಖರ್ಗೆ ಅವರು ಸೋಲಿನ ಭೀತಿಯಿಂದಾಗಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. ನನ್ನ ನಾಮಪತ್ರ ರದ್ದು ಮಾಡಲು ಮಲ್ಲಿಕಾರ್ಜುನ ಖರ್ಗೆ ಅವರು ಹಲವು ಯತ್ನಗಳನ್ನು ಮಾಡಿದ್ದಾರೆ. ನಾವು ಅವರ ವಿರುದ್ಧ ಕುಸ್ತಿ ಆಡಲು ಸಿದ್ಧನಾಗಿದ್ದೇನೆ. ನೀವು ನನಗೆ ಸಾಥ್ ನೀಡಬೇಕು ಎಂದು ಮತದಾರರಿಗೆ ಹೇಳಿಕೊಂಡರು.
ಇದೇ ಸಂದರ್ಭದಲ್ಲಿ ಮತನಾಡಿದ ಅವರು, ಮಲ್ಲಿಕಾರ್ಜುನ್ ಖರ್ಗೆ ಈ ಹಿಂದೆ ಎದುರಿಸಿದ್ದ 11 ಚುನಾವಣೆಗಳು ಮ್ಯಾಚ್ ಫಿಕ್ಸಿಂಗ್ ಆಗಿದ್ದವು, ಖರ್ಗೆ ಅವರು ಇದೇ ಮೊದಲ ಬಾರಿ ನಿಜವಾದ ಚುನಾವಣೆ ಎದುರಿಸುತ್ತಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಚುನಾವಣೆಗಳು ಮ್ಯಾಚ್ ಫಿಕ್ಸಿಂಗ್ ಆಗಿದ ಕಾರಣ ಗೆಲ್ಲುತ್ತ ಬಂದಿದ್ದರು ಎಂದು ಟೀಕಿಸಿದ್ದರು.
ಈ ಸಂದರ್ಭದಲ್ಲಿ ಪಕ್ಷದ ಗಣ್ಯರು ಮತ್ತು ಮುಖಂಡರು ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…