ಹುಣಸಗಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ-ನಗರದಲ್ಲಿ ವಿಜಯೋತ್ಸವ

0
13

ಸುರಪುರ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಣಸಗಿ ಪಟ್ಟಣ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ ಹಿನ್ನೆಲೆ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅದ್ಧೂರಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಜಾ ವೇಣುಗೋಪಾಲ ನಾಯಕ ಮಾತನಾಡಿ,ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು,ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ ಶಿವಕುಮಾರ ಅವರ ನೇತೃತ್ವದಲ್ಲಿ ನೀಡಿರುವ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ಕ್ಷೇತ್ರದಲ್ಲಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರು ಹಿಂದಿನಿಂದಲೂ ಮಾಡಿರುವ ಅಭಿವೃಧ್ಧಿ ಕಾರ್ಯಗಳನ್ನು ಮೆಚ್ಚಿ ಹುಣಸಗಿ ಪಟ್ಟಣದ ಜನತೆ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.ಒಟ್ಟು 16 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಕಾಂಗ್ರೆಸ್‍ಗೆ ಅಧಿಕಾರವನ್ನು ನೀಡಿರುವ ಹುಣಸಗಿ ಪಟ್ಟಣದ ಎಲ್ಲ ಮತದಾರರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಹಾತ್ಮ ಗಾಂಧಿ ವೃತ್ತ ಹಾಗೂ ಕಾಂಗ್ರೆಸ್ ಕಚೇರಿ ವಸಂತ ಮಹಲ್ ಆವರಣದಲ್ಲಿ ಪಟಾಕಿ ಸಿಡಿಸಿ ಗುಲಾಲು ಎರಚಿ,ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ,ಮುಖಂಡರಾದ ರಾಜಾ ವಿಜಯಕುಮಾರ ನಾಯಕ,ರಾಜಾ ಸುಶಾಂತ ನಾಯಕ,ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಭಂಡಾರೆಪ್ಪ ನಾಟೇಕಾರ್,ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ,ಚನ್ನಪ್ಪಗೌಡ ದೇವಾಪುರ,ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here