ಕೋವಿಡ್ ಜೆ.ಎನ್-1: ಹೊಸ ತಳಿ ಬಗ್ಗೆ ಅನಗತ್ಯ ಭಯ ಬೇಡ, ಎಚ್ಚರಿಕೆ ವಹಿಸಿದರೆ ಸಾಕು | ಡಿ.ಸಿ

ಕಲಬುರಗಿ: ಕೋವಿಡ್ ಜೆ.ಎನ್.1 ತಳಿ ಕುರಿತು ಅನಗತ್ಯ ಭಯ, ಗೊಂದಲ ಬೇಡ. ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಿದರೆ ಸಾಕು ಎಂಬ ಅರಿವು ಜಿಲ್ಲೆಯ ಜನತೆಯಲ್ಲಿ ಮೂಡಿಸುವತ್ತ ಹೆಚ್ಚು ಗಮನಹರಿಸಿ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ತಾಲೂಕ ಪಂಚಾಯತ್ ಇ.ಓ. ಗಳೊಂದಿಗೆ ಕೋವಿಡ್ ಜೆ.ಎನ್.-1 ತಳಿ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅವರು, ಸೋಂಕು ಹೆಚ್ಚಾದಲ್ಲಿ ಅದರ ನಿಯಂತ್ರಣಕ್ಕೆ ಕೈಗೊಂಡ ಕ್ರಮದ ಬಗ್ಗೆ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು ಡ್ರೈ ರನ್ ಮಾಡಿ ಸನ್ನಧರಾಗಿರಬೇಕು. ಬೆಡ್, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಎಲ್ಲಾ ಮೂಲಸೌಕರ್ಯ ಇರುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ತಹಶೀಲ್ದಾರರು, ತಾಲೂಕ ಪಂಚಾಯತ್ ಇ.ಓ ಹಾಗೂ ತಾಲೂಕಾ ಆರೋಗ್ಯಾಧಿಕಾರಿಗಳು ಇದರ ಮೇಲೆ ನಿಗಾ ವಹಿಸಬೇಕು ಎಂದರು.

ಶಾಲಾ, ವಸತಿ ನಿಲಯ, ಸರ್ಕಾರಿ ಕಚೇರಿ, ಮಾಲ್ ಸೇರಿದಂತೆ ಹೆಚ್ಚು ಜನ ಸಮೂಹ ಸೇರುವ ಕಡೆ ಸ್ಯಾನಿಟೈಸರ್, ಮಾಸ್ಕ್ ಬಳಕೆಗೆ ಅರಿವು ಮೂಡಿಸಬೇಕು. ಮಕ್ಕಳು, ಗರ್ಭಿಣಿ ಮಹಿಳೆಯರು, 60 ವರ್ಷ ಮೇಲ್ಪಟ್ಟ ಹಿರಿಯರು, ಕೋ ಮಾರ್ಬಿಡ್ ಹೊಂದಿರುವರು ಹೆಚ್ಚಿನ ಆರೋಗ್ಯ ಕಾಳಜಿ ವಹಿಸಬೇಕು, ಅನಗತ್ಯ ಪ್ರಯಾಣ ಮಾಡಬಾರದೆಂದು ಅವರಿಗೆ ತಿಳಿ ಹೇಳಬೇಕು ಎಂದರು.

ಪ್ರಸ್ತುತ ಜಿಲ್ಲೆಯಲ್ಲಿ ಹೊಸದಾಗಿ ಕೋವಿಡ್ ಪತ್ತೆಯಾದ ಐವರ ಅರೋಗ್ಯ ಸ್ಥಿತಿಗತಿ ಕುರಿತು ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು,
ಪ್ರಸ್ತುತ‌ ಚಳಿಗಾಳ ಇರುವುದರಿಂದ ಫ್ಲೂ ಇದ್ದು, ಗಾಬರಿ ಆಗುವುದು ಬೇಡ. ರಾಜ್ಯ ಸರ್ಕಾರದ ನಿರ್ದೇಶನದಂತೆ ಸಾರಿ, ಐ.ಎಲ್.ಐ ಹಿನ್ನೆಲೆ ಇದ್ದವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಎಲ್ಲರಿಗೂ ತಪಾಸಣೆಗೆ ಒಳಪಡಿಸಿ ಭಯದ ವಾತಾವರಣ ನಿರ್ಮಿಸುವುದು ಬೇಡ ಎಂದರು.

ಡಿ.ಎಚ್.ಓ ಡಾ ರಾಜಶೇಖರ ಮಾಲಿ ಮಾತನಾಡಿ, ಇತ್ತೀಚೆಗೆ ದೇಶದೆಲ್ಲಡೆ ಜೆ.ಎನ್-1 ತಳಿ ಪತ್ತೆಯಾದ ನಂತರ ಜಿಲ್ಲೆಯಲ್ಲಿ ಇದೂವರೆಗೆ ಸಾರಿ, ಐ‌.ಎಲ್.ಐ, ಕೋಮಾರ್ಬಿಡ್ ಹಿನ್ನೆಲೆ ಹೊಂದಿರುವ 683 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದ್ದು, ಇದರಲ್ಲಿ 5 ಜನರಿಗೆ ಕೋವಿಡ್ ಸೊಂಕು ದೃಢಪಟ್ಟಿದೆ. ಐವರಲ್ಲಿ ಮುಂಬೈ ಪ್ರಯಾಣ ಹಿನ್ನೆಲೆ ಹೊಂದಿರುವ 8 ವರ್ಷದ ಬಾಲಕಿ ಜಿಮ್ಸ್ ಅಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿ ಆರೋಗ್ಯ ಸ್ಥಿರವಾಗಿದೆ. ಉಳಿದಂತೆ ನಾಲ್ವರು ಹೋಮ್‌ ಐಸೋಲೇಷನ್ ನಲ್ಲಿದ್ದು, ಆರೋಗ್ಯ ಸಿಬ್ಬಂದಿ ಅವರ ಮೇಲೆ ನಿಗಾ ವಹಿಸಿದ್ದಾರೆ ಎಂದರು.

ಜಿಮ್ಸ್ ನಲ್ಲಿ ಎರಡು ಆಕ್ಸಿಜನ್ ಪ್ಲ್ಯಾಂಟ್, ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಜನರೇಷನ್ ಪ್ಲ್ಯಾಂಟ್ ಕಾರ್ಯಚರಣೆಯಲ್ಲಿದೆ. ಜಿಮ್ಸ್ ನಲ್ಲಿ 50, ತಾಲೂಕಾ ಆಸ್ಪತ್ರೆಯಲ್ಲಿ ತಲಾ 20 ಐಸೋಲೇಷನ್ ಬೆಡ್ ಕಾಯ್ದಿರಿಸಿದೆ. ಸರ್ಕಾರಿ ಅರೋಗ್ಯ ಸಂಸ್ಥೆಯಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದರು.

ಎಸ್.ಪಿ. ಅಡ್ಡೂರು ನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಅಯುಕ್ತ ಭುವನೇಶ ಪಾಟೀಲ ಅವರು ಕೋವಿಡ್ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಮಹಾನಗರ ಪಾಲಿಕೆ ಅಡಳಿತ ವಿಭಾಗದ ಉಪ ಆಯುಕ್ತ ಮಾಧವ ಗಿತ್ತೆ, ಸಹಾಯಕ ಆಯುಕ್ತರಾದ ರೂಪಿಂದರ್ ಕೌರ್, ಆಶಪ್ಪ ಪೂಜಾರಿ, ಜಿಮ್ಸ್ ನಿರ್ದೇಶಕ ಡಾ.ಉಮೇಶ ಎಸ್.ಆರ್., ಆರ್.ಸಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ ಸೇರಿದಂತೆ ತಾಲೂಕಿನ ತಹಶೀಲ್ದಾರರು, ತಾಲೂಕ ಪಂಚಾಯತ್ ಇ.ಓ, ತಾಲೂಕಾ ಆತೋಗ್ಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅಧಿಕಾರಿಗಳು ಭಾಗವಹಿಸಿದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

7 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

7 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

7 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

7 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420