- ಎಂ.ಡಿ ಮಶಾಖ ಚಿತ್ತಾಪುರ
ಚಿತ್ತಾಪುರ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಬಿಡುಗಡೆಗೊಳಿಸಬೇಕೆಂದು ಕರವೇ ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ತಹಶೀಲ್ದಾರ್ ಸೈಯದ್ ಷಾಷಾವಲಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಈಶ್ವರಮ್ಮ, ಶೇರ್ ಅಲಿ, ಸಾಬಣ್ಣ ಲಾಡ್ಲಾಪುರಕರ್, ಮೊಹ್ಮದ್ ಅಪಸರ್, ಜಗನ್ನಾಥ ದಂಡೋತಿ, ಶರಣು ಭಾಗೋಡಿ, ಮೈನೋದ್ದಿನ್ ದಂಡೋತಿ, ಭಾಗೇಶ ದಂಡೋತಿ, ಗಣೇಶ ರಾಠೋಡ ಇದ್ದರು.