ಬೆಂಗಳೂರು: ಯಾದಗಿರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ನೀಲಕಂಠರಾಯ ಯಲ್ಹೇರಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬಿಜೆಪಿ ಯುವ ಮುಖಂಡ ನೀಲಕಂಠರಾಯ ಯಲ್ಹೇರಿ ಅವರು ಅರಿಕೇರಾ (ಕೆ) ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಅಪಘಾತದಲ್ಲಿ ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ಬೇಸರವಾಗಿದೆ ಎಂದು ತಿಳಿಸಿದ್ದಾರೆ.
ಅದು ಬಿಜೆಪಿಯ ಆರಂಭಿಕ ಕಾಲಘಟ್ಟ. ಕಾಂಗ್ರೆಸ್ ಮತ್ತು ಜನತಾ ಪಕ್ಷಗಳು ಜಿಲ್ಲೆಯಲ್ಲಿ ಉತ್ತುಂಗದಲ್ಲಿದ್ದ ಸಂದರ್ಭ. ಬಿಜೆಪಿ ಝಂಡಾ ಹಿಡಿಯಲು ಕಾರ್ಯಕರ್ತರು ಇರದಿದ್ದಾಗ ಯಲ್ಹೇರಿ ಅವರು, ಹಳ್ಳಿಹಳ್ಳಿ ಸುತ್ತಾಡಿ ಜಾಜಾದ ಕಲ್ಲಿನಿಂದ ಪಕ್ಷದ ಚಿಹ್ನೆ ಕಮಲದ ಚಿತ್ರ ಬಿಡಿಸಿ, ಸಂಘಟನೆ ಮಾಡಿದವರು. 2006ರಲ್ಲಿ ಅಂದಿನ ಶಾಸಕರಾಗಿದ್ದ ಡಾ.ವೀರಬಸವಂತರಡ್ಡಿ ಮುದ್ನಾಳರನ್ನು ಬಿಜೆಪಿಗೆ ಸೇರಿಸುವಲ್ಲಿ ನೀಲಕಂಠರಾಯ ಅವರ ಪಾತ್ರ ಅತ್ಯಂತ ಪ್ರಮುಖವಾಗಿತ್ತು. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ದುಡಿದು, ಹಂತಹಂತವಾಗಿ ಪದಾಧಿಕಾರಿ ಹುದ್ದೆ ಪಡೆದಿದ್ದಲ್ಲದೆ, ಸಾಕಷ್ಟು ಕಾರ್ಯಕರ್ತರನ್ನು ಗುರುತಿಸಿದವರು. ಪಕ್ಷದ ವಿಭಾಗೀಯ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, ಪ್ರಸ್ತುತ ಜಿಲ್ಲಾ ಉಪಾಧ್ಯಕ್ಷರಾಗಿದ್ದರು ಎಂದು ಸ್ಮರಿಸಿದ್ದಾರೆ.
ಯಲ್ಹೇರಿಯವರು ಕೇವಲ ಬಿಜೆಪಿ ಮುಖಂಡರಾಗಿರದೆ, ಯಾದಗಿರಿ ಜಿಲ್ಲೆಯ ಸಾಂಸ್ಕøತಿಕ ರಾಯಭಾರಿಗಳಾಗಿದ್ದರು. ಹಿಂದು ಧರ್ಮ, ರಾಷ್ಟ್ರ ಹಾಗೂ ಗ್ರಾಮೀಣ ಭಾಗದಲ್ಲಿನ ಶಿಕ್ಷಣದ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಿದ್ದರು. ಮಾಜಿ ಸಂಸದ ಡಾ.ಬಸವರಾಜ ಪಾಟೀಲ್ ಸೇಡಂರ ಖಾಸಾ ಶಿಷ್ಯ ಬಳಗದಲ್ಲಿ ಒಬ್ಬರಾಗಿ, ಕಲಬುರಗಿ ಕಂಪು, ವಿಕಾಸ ಅಕಾಡೆಮಿ ಸಂಘಟನೆ ಜಿಲ್ಲಾ ಜವಾಬ್ದಾರಿ ಹೊತ್ತುಕೊಂಡು ಸಮರ್ಥವಾಗಿ ಮುನ್ನಡೆಸಿದ್ದರು ಎಂದು ವಿವರಿಸಿದ್ದಾರೆ.
ಸರ್ಕಾರವು ಹಿಂದೆ ಸ್ಥಾಪಿಸಿದ್ದ ಕಲ್ಯಾಣ ಕರ್ನಾಟಕ ಮಾನವ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ನಾಮನಿರ್ದೇಶಿತ ಸದಸ್ಯರಾಗಿ ಮಹಿಳೆಯರಿಗೆ, ವಿಕಲಚೇತನರಿಗೆ ಸರ್ಕಾರದಿಂದ ಸಾಕಷ್ಟು ನೆರವು ಕೊಡಿಸಿದ್ದರು. ಈ ಹಿಂದೆ ಇನ್ಫೋಸಿಸ್ ಸಹಯೋಗದಡಿ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯಿಂದ ಗ್ರಾಮೀಣ ಭಾಗದಲ್ಲಿ ಶೌಚಗೃಹ ನಿರ್ಮಾಣ ಯೋಜನೆಯಲ್ಲಿ ಬಹುದೊಡ್ಡ ಕ್ರಾಂತಿಯನ್ನೇ ಮಾಡಿದ್ದ ಯಲ್ಹೇರಿ, ಅಂದಿನ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಮ್ ರಮೇಶ್ರಿಂದ ಭೇಷ್ ಎನಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ಸದಾ ಹಿಂದುತ್ವ, ದೇಶದ ಬಗ್ಗೆ ನೀಲಕಂಠರಾಯ ಯಲ್ಹೇರಿ ಮನ ತುಡಿಯುತ್ತಿತ್ತು. ಗುರುರಾಜ ಕರಜಗಿ, ವಾಗ್ಮಿ ಗೋವಿಂದಾಚಾರ್ಯರಂಥ ಮೇಧಾವಿಗಳ ಒಡನಾಟವಿಟ್ಟುಕೊಂಡಿದ್ದರು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬ, ಬಂಧು ಮಿತ್ರರು ಮತ್ತು ಅಭಿಮಾನಿಗಳಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…