ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ್ರು ಸೇರಿದಂತೆ ಕರವೇ ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿ ಸೋಮವಾರ ತಾಲೂಕಾ ಕರವೇ ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಳಕರ, ಕಲ್ಬುರ್ಗಿ ಜಿಲ್ಲಾ ಅಧ್ಯಕ್ಷ ಪುನೀತ್ ರಾಜಕುಮಾರ್. ಸಿ .ಕವಡೆ ಹಾಗೂ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರು ನಿರ್ಮಲ ತಳವಾರ್ ನೇತೃತ್ವದಲ್ಲಿ ತಹಸೀಲ್ದಾರ ಕಾರ್ಯಾಲಯದಲ್ಲಿ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಕರವೇ ಜಿಲ್ಲಾಧ್ಯಕ್ಷ ಪುನೀತರಾಜಕುಮಾರ.ಸಿ.ಕವಡೆ ಹಾಗೂ ತಾಲೂಕಾಧ್ಯಕ್ಷ ಯಲ್ಲಾಲಿಂಗ ಹೈಯ್ಯಳಕರ್ ಮಾತನಾಡಿ,ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ್ರು ಸೇರಿದಂತೆ 53 ಕಾರ್ಯಕರ್ತರನ್ನು ಬಂಧನ ಮಾಡುವ ಮೂಲಕ ರಾಜ್ಯ ಸರ್ಕಾರ ಕನ್ನಡ ನಾಡಿಗೆ ಮತ್ತು ಕನ್ನಡಿಗರಿಗೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲನೇ ಟೋಲ್ ದಾಸಹಳ್ಳಿಯಿಂದ ಕಬ್ಬನ್ ಪಾರ್ಕ್ ವರೆಗೂ ಕನ್ನಡದ ನಾಮಫಲಕ ಕಡ್ಡಾಯ ಅಭಿಯಾನ ಪ್ರತಿಭಟನೆ ಮೆರವಣಿಗೆ ನಡೆಸುತ್ತೇವೆಂದು ಸರ್ಕಾರಕ್ಕೆ ತಿಳಿಸಿದ್ದು ಆದರೂ ಪೆÇಲೀಸರನ್ನು ಇಟ್ಟುಕೊಂಡು ಮೆರವಣಿಗೆಗೆ ಅವಕಾಶ ನೀಡದ ಕಾರಣ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಆದಕಾರಣ ಕೆಲವು ಕಡೆ ಆಂಗ್ಲನಾಮ ಫಲಕಗಳಿಗೆ ಮಸಿ ಬಳಿಯಲಾಯಿತು ಮತ್ತು ತೆರವುಗೊಳಿಸಲಾಯಿತು. ರಾಜ್ಯ ಸರ್ಕಾರಕ್ಕೆ ಕಾನೂನು ಮಾಡಿದೆ. ಕಾನೂನಿನ ಪ್ರಕಾರ ಅಂಗಡಿಯ ನಾಮಫಲಕಗಳು, ಜಾಹೀರಾತು ಫಲಕಗಳು, ಪೆಟ್ರೋಲ್ ಬಂಕ್ ಜಾಹೀರಾತು ಫಲಕಗಳು, ಐಟಿಬಿಟಿ ಕಂಪನಿಯ ನಾಮಫಲಕಗಳು ಕನ್ನಡದಲ್ಲಿ ಶೇಕಡ 60%ರಷ್ಟು ಇರಬೇಕೆಂದು ಸರ್ಕಾರ ಆದೇಶ ಮಾಡಿದ್ದರು ಸಹ, ಸರಿಯಾದ ಕ್ರಮ ಕೈಗೊಳ್ಳದೆ ಇರುವುದರಿಂದ ಸರ್ಕಾರ ಮಾಡಬೇಕಾದ ಕೆಲಸವನ್ನು ಕರ್ನಾಟಕ ರಕ್ಷಣಾ ವೇದಿಕೆ ಮಾಡಿದೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಕೆಯ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ್ರು ಸೇರಿದಂತೆ ಕರವೇ ಕಾರ್ಯಕರ್ತರ ಬಿಡುಗಡೆಗೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಮಹಮ್ಮದ್ ಗೌಸ್, ಉಪಾಧ್ಯಕ್ಷ ಮಹೇಶ ಕಾಂಬಳೆ, ತಾಲೂಕು ಪ್ರಧಾನ ಕಾರ್ಯದರ್ಶಿ ಮಹೇಶ ಅಲ್ಕಟ್ಟಿ ,ಯುವ ಘಟಕ ಅಧ್ಯಕ್ಷರು ಮೆಹಬೂಬ್ ಬದ್ರಿ,ಕಾರ್ಮಿಕ ಘಟಕ ಅಧ್ಯಕ್ಷರು ರಾಜು ಭೀಮನಹಳ್ಳಿ ,ಸುರೇಶ್ ಹೈಯ್ಯಳಕರ ಸಾಗರ ಬಂದೂಕ್, ಮುತ್ತಪ್ಪ ಹಲಕಟ್ಟಿ, ಗುರು, ಸಂದೀಪ, ರಾಕೇಶ ಹಾಗೂ ಕರವೇ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…