ಬಿಸಿ ಬಿಸಿ ಸುದ್ದಿ

ಗುಲಬರ್ಗಾ ವಿವಿ ಮಟ್ಟದ ಖೋ ಖೋ ಪಂದ್ಯಾಳಿಗೆ ಮಾಜಿ ಸಚಿವ ಚಾಲನೆ

ಸುರಪುರ: ನಗರದ ಶ್ರೀ ಪ್ರಭು ಕಲಾ ವಿಜ್ಞಾನ ಹಾಗೂ ಜೆ. ಎಮ್. ಬೊಹ್ರಾ ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಇವರ ಸಹಯೋಗದಲ್ಲಿ ೨೦೧೯-೨೦ನೇ ಸಾಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಏಕವಲಯ (ಪುರುಷರ) ಖೋ-ಖೋ ಪಂದ್ಯಾವಳಿಗಳನ್ನು ಶ್ರೀಪ್ರಭು ಕಾಲೇಜು ಮೈದಾನದಲ್ಲಿ ನಡೆಸಲಾಯಿತು.

ಮಾಜಿ ಸಚಿವರಾದ ರಾಜಾ ಮದನಗೋಪಾಲ ನಾಯಕ ಪಂದ್ಯಾವಳಿಗಳಿಗೆ ಚಾಲನೆ ನೀಡಿ ಮಾತನಾಡುತ್ತಾ, ಖೋ-ಖೋ ಪಂದ್ಯಾವಳಿಗಳಂತ ದೇಸಿ ಪಂದ್ಯಗಳಿಗೆ ಉತ್ತಮ ಪ್ರೋತ್ಸಾಹದ ಅವಶ್ಯಕತೆಯಿದೆ. ಇಂದಿನ ಯುವಕರು ಕ್ರೀಡೆಗಳಲ್ಲಿ ತೋಡಗಿಸಿಕೊಳ್ಳದೆ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿರುವುದು ವಿಷಾದನೀಯ ಎಂದು ತಿಳಿಸಿದರು. ಆರೋಗ್ಯ ಕಾಪಾಡುವಲ್ಲಿ ಕ್ರೀಡಾ ಚಟುವಟಿಕೆಗಳು ಅಗತ್ಯ ಎಂದು ಹೇಳಿದರು.

ಕಾಲೇಜಿನ ಉಪಪ್ರಾಚಾರ್ಯರಾದ ಪ್ರೊ. ವೇಣುಗೋಪಾಲ ನಾಯಕ ಜೇವರ್ಗಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕ್ರೀಡಾ ಧ್ವಜಾರೋಹಣ ನೇರೆವೇರಿಸಿದ ಗುಲ್ಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎಸ್.ಎಮ್. ಪಾಸೋಡಿಯವರು ಮಾತನಾಡುತ್ತಾ, ಸುರಪುರದ ನೆಲ ಕ್ರೀಡೆಗೆ ಹೆಸರಾಗಿದ್ದು, ರಾಷ್ಟ್ರೀಯ ಕ್ರೀಡಾ ಲೋಕಕ್ಕೆ ಈ ನೆಲ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನ ನೀಡಿದೆ ಮತ್ತು ಕ್ರೀಡೆಯಲ್ಲಿ ಕ್ರೀಡಾ ಮನೋಭಾವದ ಮೂಲಕ ಪ್ರತಿ ಕ್ರೀಡೆಯನ್ನು ಕ್ರೀಡಾಪಟುಗಳು ಗೆಲ್ಲಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಡಾ. ಎಸ್.ಎಚ್. ಹೊಸಮನಿಯವರು ಮಾತನಾಡಿದರು.

ಶ್ರೀನಿವಾಸ ನಾಯಕ ದರಬಾರಿ, ಬಸವರಾಜ ಜಮದ್ರಖಾನಿ ಹಾಗೂ ಮಹಾವಿದ್ಯಾಲಯದ ದೈಹಿಕ ನಿರ್ದೇಶಕರಾದ ಡಾ. ರಮೇಶ ಶಹಾಪುರಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಭಾಜನರಾದ ಡಾ. ಸಾಯಿಬಣ್ಣ ಮುಡಬೂಳ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರುಗಳಾದ ಪ್ರೊ. ಎಮ್. ವಿಶ್ವನಾಥ, ಪ್ರೊ. ಎನ್.ಎಸ್. ಪಾಟೀಲ್, ಪ್ರೊ. ಎಸ್.ಎಸ್. ಪಾಟೀಲ್, ಪ್ರೊ. ಸಿದ್ದಣ್ಣ ಬರ್ಧಿ, ಪ್ರೊ. ಎಮ್.ಡಿ. ವಾರಿಸ್,ಎಸ್.ಎಮ್. ಸಜ್ಜನ, ಡಾ. ಬಸವರಾಜ ಹಿರೇಮಠ, ಡಾ. ಶರಣಗೌಡ ಪಾಟಿಲ್, ಪ್ರೊ. ಹಣಮಂತ ಸಿಂಗೆ, ಪ್ರೊ. ಗುರುರಾಜ ಕುಲ್ಕರ್ಣಿ, ಡಾ. ಉಪೇಂದ್ರ ನಾಯಕ, ಪ್ರೊ. ಮಂಜುನಾಥ ಚೆಟ್ಟಿ, ಪ್ರೊ. ವಿಜಯಕುಮಾರ ಬಣಗಾರ, ಪ್ರೊ. ಶ್ರೀಶೈಲ ಕೆ. ಹಾಗೂ ಬೋಧಕೇತರ ಸಿಬ್ಬಂದಿಗಳಾದ ವೀರಣ್ಣ ಜಾಕಾ, ಯಲ್ಲಪ್ಪ ಜಹಗೀರದಾರ, ಸಂತೋಷ ಹೆಡಗಿನಾಳ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕುಮಾರ ಆಂಜನೇಯ ದೇವರ ಗೋನಾಲ ಪ್ರಾರ್ಥಿಸಿದರು, ಡಾ. ಸುರೇಶ ಮಾಮಡಿ ನಿರೂಪಿಸಿದರು, ಡಾ. ಸಾಯಿಬಣ್ಣ ಮುಡಬೂಳ ಸ್ವಾಗತಿಸಿದರು, ಡಾ. ಸಿ.ಎಮ್. ಸುತಾರ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago