ಸುರಪುರ: ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕುವಂತೆ ಆಗ್ರಹಿಸಿ ಹೋರಾಟ ಮಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಅನೇಕ ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ ಬಿಜಾಸಪುರ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ರಾಜ್ಯದಲ್ಲಿನ ಎಲ್ಲಾ ನಾಮಫಲಕಗಳು ಶೇ 60 ರಷ್ಟು ಕನ್ನಡದಲ್ಲಿಯೇ ಇರಬೇಕು ಎನ್ನುವ ನಿಯಮವಿದ್ದರು,ಯಾವುದೇ ಅಂಗಡಿ ಮುಂಗಟ್ಟು ವ್ಯಾಪಾರ ವಾಣಿಜ್ಯ ಕೇಂದ್ರಗಳು ಇದನ್ನು ಪಾಲಿಸುತ್ತಿಲ್ಲ. ಸರಕಾರಗಳು ಕಾಟಾಚಾರಕ್ಕೆ ಆಗೊಮ್ಮೆ ಈಗೊಮ್ಮೆ ಕನ್ನಡ ನಾಮಫಲಕ ಹಾಕುವಂತೆ ಹೇಳಿಕೆ ನೀಡಿ ಕೈತೊಳೆದುಕೊಳ್ಳುತ್ತವೆ,ಇದರಿಂದ ರಾಜ್ಯದಲ್ಲಿರುವ ಅನೇಕ ವ್ಯಾಪಾರ ವಾಣಿಜ್ಯ ಕೇಂದ್ರಗಳವರಿಗೆ ಕನ್ನಡ ಕಡ್ಡಾಯ ನಾಮಫಲಕದ ಬಗ್ಗೆ ಕಿಂಚಿತ್ತೂ ಅಭಿಮಾನವಿಲ್ಲ,ಸರಕಾರಕ್ಕೂ ಇದು ಬೇಕಿಲ್ಲ,ಆದರೆ ಸ್ವಾಭಿಮಾನಿ ಕನ್ನಡ ಪರ ಹೋರಾಟಗಾರರು ಪ್ರಶ್ನಿಸಿದರೆ ಅವರ ಮೇಲೆ ಕೇಸ್ ಹಾಕಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತೀರಿ, ನಿಜವಾಗಿಯೂ ಸರಕಾರಗಳಿಗೆ ಕನ್ನಡದ ಬಗ್ಗೆ ಬದ್ಧತೆ ಇದ್ದರೆ ಮೊದಲು ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಲೇಬೇಕು ಎನ್ನುವ ಕಠಿಣ ಕ್ರಮಕ್ಕೆ ಮುಂದಾಗಬೇಕು,ಅದು ಬಿಟ್ಟು ಹೀಗೆ ಹೋರಾಟಗಾರರ ಮೇಲೆ ಕೇಸ್ ಹಾಕುವ ಕೆಲಸಕ್ಕೆ ಮುಂದಾದರೆ ರಾಜ್ಯದಲ್ಲಿ ಉಗ್ರ ಪ್ರತಿಭಟನೆ ಸರಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿ,ಕೂಡಲೇ ಈಗ ಬಂಧನಕ್ಕೊಳಪಡಿಸಿರುವ ಟಿ.ಎ ನಾರಾಯಣಗೌಡ ಸೇರಿದಂತೆ ಎಲ್ಲರನ್ನು ಬಿಡುಗಡೆ ಮಾಡಲೆಬೇಕು ಎಂದು ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…