ಬಿಸಿ ಬಿಸಿ ಸುದ್ದಿ

ಸಿದ್ದೇಶ್ವರ ಸ್ವಾಮೀಜಿ ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು; ನಾಗರಾಜ್ ವೆಂಕಟಾಪುರ

ಕುಕನೂರ (ಕೊಪ್ಪಳ ಜಿಲ್ಲೆ ): ತಾಲೂಕಿನ ಬನ್ನಿಕೊಪ್ಪ ಗ್ರಾಮದ ಮಸೂತಿ ಆವರಣದಲ್ಲಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಪುಣ್ಯ ಸ್ಮರಣೋತ್ಸವ ಅಂಗವಾಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ಪೂಜೆ ಸಮರ್ಪಿಸುವುದರ ಮೂಲಕ ಮಾತನಾಡಿದ ಗ್ರಾಮ ಪಂಚಾಯತ್ ಸದಸ್ಯರಾದ ನಾಗರಾಜ್ ವೆಂಕಟಾಪುರ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜೀವಂತ ದೇವರಿಗೆ ಹೋಲಿಸಬಹುದಾದ ಮಾನವರಲ್ಲಿ ಒಬ್ಬರು. ಅವರ ಗುಣಗಳನ್ನು ವಿವರಿಸುವಲ್ಲಿ ಪದಗಳು ಕಡಿಮೆಯಾಗಬಹುದು. ಅವರ ಅನಿಸಿಕೆಗಳನ್ನು ಅನಕ್ಷರಸ್ಥರಿಂದಲೂ ಚೆನ್ನಾಗಿ ಅರ್ಥಪೂರ್ಣವಾಗಿ ಅರ್ಥೈಸಿಕೊಳ್ಳಬಹುದು. ಅವರು ಬಹಳ ಅರ್ಥಮಾಡಿಕೊಳ್ಳುವ ಮತ್ತು ಆನಂದಿಸುವ ರೀತಿಯಲ್ಲಿ ಬಹಳ ಕಠಿಣ ವಿಷಯಗಳನ್ನು ಬೋಧಿಸುತ್ತಾರೆ ಎಂದು ಹೇಳಿದರು.

ನಂತರ ಮಾತನಾಡಿದ ಗ್ರಾಮದ ಹಿರಿಯರು ವೆಂಕರರೆಡ್ಡಿ ದೊಡ್ಡಯರಾಶಿ ಅವರು, ‘ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕವೇ ಅದೆಷ್ಟೋ ಜನರ ಬದುಕು ಬದಲಿಸಿದ್ದಾರೆ. ಅವರ ಉಪನ್ಯಾಸ ಸರಣಿಯ “ಬದುಕುವದು ಹೇಗೆ,” ನಾವು ಹೇಗೆ ಬದುಕಬೇಕು / ದಾರಿ ಮಾಡಿಕೊಳ್ಳಬೇಕು “ಲಕ್ಷಾಂತರ ಭಾರತೀಯರನ್ನು ಬದಲಾಯಿಸಿದೆ.. ಸಿದ್ದೇಶ್ವರ ಸ್ವಾಮೀಜಿ ಅಲಮ ಪ್ರಭುನ ವಚನಗಳ ಮೇಲೆ ಅಧಿಕೃತ ಭಾಷಣಕಾರರಾಗಿದ್ದಾರೆ. ಸಿದ್ದೇಶ್ವರ ಸ್ವಾಮಿಜಿಯವರು ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದಾರೆ. ಅಪಾರ ಭಕ್ತರು, ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿರುವ ಶ್ರೀಗಳು ಸರಳವಾಗಿಯೇ ಬದುಕಿದವರು. ಅವರ ಸರಳತೆಯೇ ಎಲ್ಲರಿಗೂ ಮಾದರಿ ಎಂದರು.

ನಂತರ ಮಾತನಾಡಿದ ನಾರಾಯಣ ದೊಡ್ಡಮನಿ ನಮ್ಮ ಗ್ರಾಮದಲ್ಲಿ ಮಹಾನ್ ತಪಸ್ವಿಗಳು ಮಹಾನ್ ಚೇತನ ವ್ಯಕ್ತಿಯ ಕಾರ್ಯಕ್ರಮವಲ್ಲದೆ ಇಂತಹ ಇನ್ನು ಹತ್ತಲುವಾರು ಕಾರ್ಯಕ್ರಮಗಳು ಯಶಸ್ವಿಗೊಳ್ಳಲು ಬನ್ನಿಕೊಪ್ಪ ಗ್ರಾಮದ ಸರ್ವ ಜನಾಂಗದ ಪ್ರೋತ್ಸಾಹ ಇರುವುದರಿಂದ ಇಂತಹ ಕಾರ್ಯಕ್ರಮಗಳು ಯಶಸ್ವಿಗೊಳ್ಳುತ್ತವೆ ಎಂದು ಹೇಳಿದರು.

ಪೂಜೆಯನ್ನು ನೆರವೇರಿಸಿದ ನಂತರ ಪ್ರಸಾದ ಸೇವೆಯನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಬನ್ನಿಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ವೀರಪ್ಪ ವಿರುಪಾಕ್ಷಪ್ಪ ಗೋಂದಿ, ಗ್ರಾಮ ಪಂಚಾಯತ್ ಸದಸ್ಯ ನಾಗರಾಜ್ ವೆಂಕರೆಡ್ಡಿ ವೆಂಕಟಾಪುರ, ಗ್ರಾಮದ ಹಿರಿಯರಾದ ವೆಂಕನಗೌಡ ತೆಗ್ಗಿನಮನಿ, ಶಂಕರ್ ಯರಾಶಿ, ಮರಿಗೌಡರು ತೆಗ್ಗಿನಮನಿ, ವಿರುಪಾಕ್ಷಗೌಡ ವೀರಪ್ಪನಗೌಡ, ವೆಂಕಣ್ಣ ದೊಡ್ಡ ಯರಾಶಿ, ಸಂಗನಗೌಡ ಹಳೆಮನೆ, ಮಲ್ಲಪ್ಪ ಹಳ್ಳಿಕೇರಿ, ಮಲ್ಲಪ್ಪ ಮೈನಹಳ್ಳಿ, ನಿಂಗಪ್ಪ ಸೋಂಪುರು, ಹುಚ್ಚರಪ್ಪ ಗುರಿಕಾರು, ಶರೀಫ್ ಸಾಬ್ ಎಲಿಗಾರ್, ನಜೀರ್ ಹೊಂಬಳ್, ಸುರೇಶ್ ಓಜನಹಳ್ಳಿ, ಮಾರುತಿ ಅಡವಳ್ಳಿ, ಲಿಂಗಯ್ಯ ಸ್ವಾಮಿ ಹಿರೇಮಠ, ಉಮೇಶ್ ಸಜ್ಜನ್, ಮೈಲಾರಪ್ಪ ಚಂಡಿ, ಮಲ್ಲಣ್ಣ ಡಂಬಳ, ನಾರಾಯಣ ದೊಡ್ಡಮನಿ, ಹಾಗೂ ಗ್ರಾಮದ ಗುರು ಹಿರಿಯರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago