ಕಲಬುರಗಿ: ಸಹಚರರೊಂದಿಗೆ ಸೇರಿ ಸುಲಿಗೆ ಮಾಡಿದ್ದ ಕುಖ್ಯಾತ ಸುಲಿಗೆಕೋರನಿಗೆ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಗೆ ಬಿಸಿಎ ವಿದ್ಯಾರ್ಥಿ ವಿನೇಶಕುಮಾರ್ ಹಾಜಣ್ಣಾ ಬಾಜಿಕರ್ (22) ಎಂದು ಗುರುತಿಸಲಾಗಿದೆ.
ಬಂಧಿತನಿಂದ ಸುಮಾರು ೨.೨೦ ಲಕ್ಷ ರೂ.ಗಳ ನಗದು, ಕೃತ್ಯಕ್ಕೆ ಬಳಸುತ್ತಿದ್ದ ಎನ್ನಲಾದ ಒಂದು ಲಕ್ಷ ರೂ.ಗಳ ಮೌಲ್ಯದ ದ್ವಿಚಕ್ರವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯು ನಗರದ ಶಹಾಬಜಾರ್ ಬಡಾವಣೆಯ ಹರಿಜನವಾಡಾದ ಬಸವಲಿಂಗ್ ನಗರದ ನಿವಾಸಿ ಮತ್ತು ಬಿಸಿಎ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿನ ಇನ್ನುಳಿದ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆ ಕಾರ್ಯಾಚರಣೆಯನ್ನು ಪೋಲಿಸರು ಮುಂದುವರೆಸಿದ್ದಾರೆ. ಚೌಕ್ ಪೋಲಿಸ್ ಠಾಣೆಯ ಪಿಐ ಶಕೀಲ್ ಅಹ್ಮದ್ ಅಂಗಡಿ ಹಾಗೂ ಸಿಬ್ಬಂದಿಗಳಾದ ಸಿರಾಜೋದ್ದೀನ್ ಪಟೇಲ್, ಉಮೇಶ್, ರಾಜಕುಮಾರ್, ಸಿದ್ರಾಮಯ್ಯ, ಸೈಯದ್ ತೌಸೀಫ್ ಹುಸೇನ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…