ಬಿಸಿ ಬಿಸಿ ಸುದ್ದಿ

ಸಾವಿತ್ರಿಬಾಯಿ ಫುಲೆಯವರ ಶೈಕ್ಷಣಿಕ, ಸಾಮಾಜಿಕ ಕೊಡುಗೆ ಅನನ್ಯ

ಕಲಬುರಗಿ: ಸಾವಿತ್ರಿಬಾಯಿ ಫುಲೆ ಅವರು ಮಹಿಳೆ ಕೇವಲ ನಾಲ್ಕು ಗೋಡೆಗಳ ಮಧ್ಯದಲ್ಲಿ ಕಾಲ ಕಳೆಯುವ ಸ್ಥಿತಿಯಲ್ಲಿ ಅವರನ್ನು ಹೊರಗಡೆ ಬರುವಂತೆ ಮಾಡಿ, ತಮಗೆ ಸಾಕಷ್ಟು ತೊಂದರೆಗಳ ನಡುವೆಯೂ ಮಹಿಳಾ ಶಿಕ್ಷಣಕ್ಕೆ ನಾಂದಿ ಹಾಡುವ ಮೂಲಕ ದೇಶದ ಮೊದಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಸಮಾಜದಲ್ಲಿನ ಮೌಢ್ಯತೆ, ಕಂದಾಚಾರ, ಅಂಧಶೃದ್ಧೆ, ಶೋಷಣೆಯಂತಹ ಸಮಸ್ಯೆಗಳ ನಿರ್ಮೂಲನೆಗೆ ಶ್ರಮಿಸುವ ಮೂಲಕ ಶೈಕ್ಷಣಿಕ ಮತ್ತು ಸಾಮಾಜಿಕವಾದ ಅನನ್ಯ ಕೊಡುಗೆಯನ್ನು ನೀಡಿದ್ದಾರೆ ಎಂದು ಗೋದುತಾಯಿ ಮಹಿಳಾ ಪದವಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಪುಟ್ಟಮಣಿ ದೇವಿದಾಸ ಅಭಿಮತಪಟ್ಟರು.

ನಗರದ ಸುಪರ್ ಮಾರ್ಕೆಟ್ ಪ್ರದೇಶದಲ್ಲಿನ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’, ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’, ‘ಹೈದ್ರಾಬಾದ ಕರ್ನಾಟಕ ಸಿದ್ದಾರ್ಥ ಸೇವಾ ಸಂಸ್ಥೆ’ ಮತ್ತು ‘ಕನ್ನಡ ಜಾನಪದ ಪರಿಷತ್’ನ ಜಿಲ್ಲಾ ಘಟಕ ಇವೆಲ್ಲವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ‘ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ 193ನೇ ಜನ್ಮದಿನಾಚರಣೆ’ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ಸಾವಿತ್ರಿಬಾಯಿ ಫುಲೆ ಅವರು ತಮ್ಮ ಪತಿ ಮಹಾತ್ಮ ಜ್ಯೋತಿಬಾ ಫುಲೆ ಜೊತೆಗೊಡಿ ಜೀವನದುದ್ದಕ್ಕೂ ಹೋರಾಟ ಮಾಡಿ, ಸಮಾಜದ ಸುಧಾರಣೆಗಾಗಿ ಶ್ರಮಿಸಿದ ಮಹಾನ ವ್ಯಕ್ತಿಯಾಗಿದ್ದಾರೆ. ‘ಸತ್ಯ ಶೋಧಕ ಸಮಾಜ’ದ ಮೂಲಕ ಬಾಲ್ಯ ವಿವಾಹ, ವಿಧವೆಯರ ಶೋಷಣೆ ವಿರುದ್ಧ ಸಂಘಟಿತ ಹೋರಾಟ ಮಾಡಿದರು. ಶೋಷಿತ ಜನಾಂಗವು ಅನುಭವಿಸುತ್ತಿದ್ದ ಮೂಕ ರೋಧನೆಗೆ ಅವರು ಧ್ವನಿಯಾಗಿ ತಮ್ಮಅಮೂಲ್ಯವಾದ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ.ನಿಂಗಪ್ಪ ಫುಲೆಯವರ ಜೀವನಾಧಾರಿತ ಗೀತೆಗಳನ್ನು ಪ್ರಸ್ತುತಪಡಿಸಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ, ಸಿದ್ದಾರ್ಥ ಸಂಸ್ಥೆಯ ಅಧ್ಯಕ್ಷ ನಂದಕುಮಾರ ತಳಕೇರಿ, ಶಾಲೆಯ ಮುಖ್ಯ ಶಿಕ್ಷಕಿ ನಸಿಮುನ್ನೀಸಾ ಬೇಗಂ, ಸಿಬ್ಬಂದಿಗಳಾದ ಸುವರ್ಣಾ ಮಠಪತಿ, ಬಸಮ್ಮ ಪಾಲ್ಕಿ, ಸುವರ್ಣಾ, ಶ್ರೀದೇವಿ, ರಾಹುಲ್ ಉಪಾಸೆ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

24 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago