ಕಲಬುರಗಿ: ಸೌಹಾರ್ದ ಸಹಕಾರಿಗಳು ಕೇವಲ ಪತ್ತಿನ ವ್ಯವಹಾರಗಳನ್ನು ಮಾತ್ರ ಕೈಗೊಳ್ಳದೆ ಇತರೇ ಆದಾಯ ನೀಡುವ ಸೇವೆಗಳ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸಹಕಾರ ಸಂಘಗಳು ಲಾಭಗಳಿಸಬೇಕು ಈ ರೀತಿಯ ಕಾರ್ಯದಲ್ಲಿ ಸಿದ್ದಿವಿನಾಯಕ ಸೌಹಾರ್ದ ಸಹಕಾರಿಯು ಒಂದು ಹೆಜ್ಜೆ ಮುಂದೆ ಸಾಗಿದೆ ಎಂದು ಸಹಕಾರ ಇಲಾಖೆಯ ಪ್ರಾಂತದ ಜಂಟಿ ನಿಬಂಧಕರಾದ ವಿಶ್ವನಾಥ ಮಲ್ನೋಡ ಸಂತಸ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಪ್ರಾಂತೀಯ ಕಛೇರಿ ಕಲಬುರಗಿಯಲ್ಲಿ ಸಿದ್ದಿವಿನಾಯಕ ಸೌಹಾರ್ದ ಸಹಕಾರಿ ಸಂಘದ 2024ನೇ ಸಾಲಿನ ಕ್ಯಾಲೆಂಡರ ಬಿಡುಗಡೆಗೊಳಿಸಿ ಮಾತನಾಡಿದರು.
ಸಂಘವು ಕೇವಲ ಪತ್ತಿನ ವ್ಯವಹಾರ ಕೈಗೊಳ್ಳದೆ, ತನ್ನ ಸಾಮಾಜಿಕ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿರುತ್ತದೆ. ಅದರಂತೆ ಸಹಕಾರಿಯು ಕಲಬುರಗಿ ನಗರದಲ್ಲಿ ಕಡಿಮೆ ದರದಲ್ಲಿ ಮಹಿಳೆಯರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಹಾಗೂ ಕಡು ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೇವೆಯನ್ನು ನೀಡುವ ಮೂಲಕ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಈ ಕ್ಯಾಲೆಂಡರ ಬಿಡುಗಡೆಯ ಸಭೆಯಲ್ಲಿ ಸಿದ್ದಿವಿನಾಯಕ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸಂಜೀವ ಮಹಾಜನ, ಉಪಾಧ್ಯಕ್ಷರಾದ ಎಸ್.ಎಸ್.ಪಾಟೀಲ, ಸಂಯುಕ್ತ ಸಹಕಾರಿ ನಿರ್ದೇಶಕರಾದ ಶೈಲಜಾ ತಪಲಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸಂಜೀವಕುಮಾರ ಕಪೂರ, ಪ್ರಾಂತೀಯ ವ್ಯವಸ್ಥಾಕರಾದ ಸೂರ್ಯಕಾಂತ ರಾಕಲೆ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ವಿರಶೆಟ್ಟಿ, ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರಾದ ಸುನೀತಾ ಸರಡಗಿ, ಹಿರಿಯ ಸಹಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…