ಕಲಬುರಗಿ; ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಜ.9 ರಂದು ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ.
ಜಿಲ್ಲೆಯ ಜನತೆಯ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೆ ಸ್ಪಂದಿಸುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ.