ಕಲಬುರಗಿ: ಕಳೆದ ತಿಂಗಳಾಂತ್ಯದಲ್ಲಿ ರಾಜ್ಯದಾದ್ಯಂತ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಏರ್ಪಡಿಸಿದ್ದ ʼಗೃಹಲಕ್ಷ್ಮಿʼ ಯೋಜನೆಗೆ ಸಂಬಂಧಿಸಿದ ದಾಖಲಾತಿಗಳ ಪರಿಶೀಲನೆ ಶಿಬಿರದಲ್ಲಿ ಸುಮಾರು 4 ಲಕ್ಷ ಗ್ರಾಮೀಣ ಮಹಿಳೆಯರು ಆಧಾರ್ ಕಾರ್ಡ್ ಪುನರ್‌ಪರಿಶೀಲನೆ ಹಾಗೂ ಹೊಸದಾಗಿ ಅಂಚೆ ಕಚೇರಿಯ ಐಪಿಪಿಬಿ ಖಾತೆಗಳನ್ನು ಆರಂಭಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯದ 3,48,386 ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಆಧಾರ್ ಕಾರ್ಡ್‌ಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸಿದರು. ಮೊದಲ ದಿನ 91,681 ಮಂದಿ, ಎರಡನೆಯ ದಿನ 1,31,638 ಮಂದಿ ಹಾಗೂ ಮೂರನೆಯ ದಿನ 1,25,067 ಮಂದಿ ಮಹಿಳೆಯರು ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ನಡೆದ ಶಿಬಿರಗಳಲ್ಲಿ ಭಾಗವಹಿಸಿ ತಮ್ಮ ಆಧಾರ್ ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸಿದರು. ಇದೇ ಅವಧಿಯಲ್ಲಿ 32,201 ಮಂದಿ ಮಹಿಳೆಯರು ಶಿಬಿರಗಳಲ್ಲಿ ಪಾಲ್ಗೊಂಡು ಹೊಸದಾಗಿ ಅಂಛೆ ಕಚೇರಿಯ ಐಪಿಪಿಬಿ ಖಾತೆಗಳನ್ನು ಆರಂಭಿಸಿದರು ಎಂದು ಹೇಳಿದ್ದಾರೆ.
ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಪುನರ್ ಪರಿಶೀಲನೆಗೆ ಒಳಪಟ್ಟ ಆಧಾರ್ ಕಾರ್ಡ್ ಹಾಗೂ ಹೊಸ ಅಂಛೆ ಕಚೇರಿ ಖಾತೆಗಳನ್ನು ಆಧರಿಸಿ ಅರ್ಜಿಗಳನ್ನು ಪರಿಶೀಲಿಸುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…