ಶಿವಮೊಗ್ಗ; ನಗರದಲ್ಲಿ ಈ ತಿಂಗಳ 12ರಂದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ʼಯುವನಿಧಿʼ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು ಈ ಸಂಬಂಧ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಫಲಾನುಭವಿಗಳಿಗೆ ನೇರ ಹಣ ಪಾವತಿಸುವ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಉನ್ನತ ಮಟ್ಟದ ಸಭೆಯಲ್ಲಿ ರೂಪುರೇಷೆಗಳನ್ನು ರೂಪಿಸಲಾಯಿತು. ಘೋಷಿಸಿದ್ದಂತೆ ಈಗಾಗಲೆ ನಾಲ್ಕು ಮಹತ್ತರ ಗ್ಯಾರೆಂಟಿ ಯೋಜನೆಗಳು ಯಶಸ್ವಿಯಾಗಿ ಜನಪ್ರಿಯಗೊಂಡಿದ್ದು, ಯುವಜನರ ಆಶೋತ್ತರಗಳಿಗೆ ಪೂರಕವಾದ ʼಯುವಶಕ್ತಿʼ ಯೋಜನೆಯನ್ನು ರಾಜ್ಯದ ಯುವಜನರಿಗೆ ಸಮರ್ಪಿಸುವ ಕಾರ್ಯಕ್ರಮವನ್ನು ಆಕರ್ಷಕವಾಗಿ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳಾದ ಉಮಾ ಮಹೇಶ್ವರನ್, ಡಾ.ಏಕರೂಪ್ ಕೌರ್, ಡಾ.ಹೇಮಂತ ನಿಂಬಾಳ್ಕರ್ ಮುಂತಾದವರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…