ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಬೆಂಗಳೂರಿನಿಂದ ಆಗಮಿಸುವ ಮತದಾರರಿಗೆ ಅನುಕೂಲ ಮಾಡಿಕೊಡಲು ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ ಎಂದು ಸೋಲಾಪುರ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.
ಚುನಾವಣಾ ವಿಶೇಷ ರೈಲು ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಿಂದ ಹೊರಟು ಬೀದರ ಹಾಗೂ ಬೀದರದಿಂದ ಯಶವಂತಪುರ ರೈಲು ನಿಲ್ದಾಣವರೆಗೆ ಪ್ರಯಾಣಿಸುವುದು. ಏಪ್ರಿಲ್ 22 ರಂದು ಸಾಯಂಕಾಲ 6 ಗಂಟೆಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಡುವ ವಿಶೇಷ ರೈಲು ಏಪ್ರಿಲ್ 23ರಂದು ಬೆಳಗಿನ 4.30ಗಂಟೆಗೆ ಕಲಬುರಗಿ ಹಾಗೂ ಬೆಳಗಿನ 6.30 ಗಂಟೆಗೆ ಬೀದರಗೆ ತಲುಪುವುದು. ಈ ವಿಶೇಷ ರೈಲು ಏಪ್ರಿಲ್ 23ರಂದು ಸಾಯಂಕಾಲ 7 ಗಂಟೆಗೆ ಬೀದರನಿಂದ ಹೊರಟು ಕಲಬುರಗಿಗೆ ರಾತ್ರಿ 9 ಗಂಟೆಗೆ ಆಗಮಿಸಿ ಏಪ್ರಿಲ್ 24ರಂದು ಬೆಳಗಿನ 8 ಗಂಟೆಗೆ ಯಶವಂತಪುರ ರೈಲು ನಿಲ್ದಾಣಕ್ಕೆ ತಲುಪುವುದು. ವಿಶೇಷ ರೈಲು ಒಟ್ಟು 18 ಬೋಗಿಗಳನ್ನು ಹೊಂದಿದ್ದು, ನಾಲ್ಕು ಹವಾ ನಿಯಂತ್ರಿತ, 12 ಸ್ಲೀಪರ್ ಹಾಗೂ 2 ಸಾಮಾನ್ಯ ಬೋಗಿಗಳನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…