ಕಲಬುರಗಿ; ನಗರದ ಒಕ್ಕಲಗೆರಾ ಬಡಾವಣೆಯ ಶ್ರೀ ವೀರ ತಪಸ್ವಿ ಚನ್ನವೀರ ಶಿವಾಚಾರ್ಯ ಅನುದಾನಿತ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಗಳಿಂದ ಸೇವಾ ನಿವೃತ್ತಿ ಪ್ರಯುಕ್ತ ಸಿದ್ದಣ್ಣ ಚಂದ್ರಶೇಖರ ಸಜ್ಜನ ಶಿಕ್ಷಕರಿಗೆ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ವಿದ್ಯಾರ್ಥಿಯಾದ, ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಹೇಳಿದರು.
ಇಂದು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡುತ್ತಾ ಇಂದಿನ ಕಾಲದಲ್ಲಿ ಗುರು ಶಿಷ್ಯರ ಸಂಬಂಧ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಾಗೂ 1986 ರಿಂದ ಇಲ್ಲಿವರೆಗೆ ಈ ಶಾಲೆಯಲ್ಲಿ ಕಲಿತ ಹಲವಾರು ವಿದ್ಯಾರ್ಥಿಗಳಿಂದ ನಮ್ಮ ಶಾಲೆಗೆ ಸಹಾಯ, ಸಹಕಾರ ನೀಡಬೇಕೆಂಬ ಉದ್ದೇಶದಿಂದ ಹಾಗೂ ಗುರುಗಳ ಮೇಲೆ ಗೌರವ ಹೆಚ್ಚಿಸುವ ನಿಟ್ಟಿನಲ್ಲಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
7 ರವಿವಾರ ಬೆಳಿಗ್ಗೆ 10.30 ಕ್ಕೆ ಗಂಜ ಪ್ರದೇಶದಲ್ಲಿರುವ ದಾಲ್ ಮಿಲ್ಲರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಜರುಗಲಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯ ಹೊನ್ನ ಕಿರಣಗಿಯ ಪೂಜ್ಯರಾದ ಚಂದ್ರಗುಂಡ ಶಿವಾಚಾರ್ಯರು ವಹಿಸುವರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿವರು.
ಮುಖ್ಯ ಅತಿಥಿಗಳಾಗಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀಮತಿ ಖನಿಜ ಫಾತಿಮಾ, ಮಾಜಿ ಶಾಸಕರು, ಕೆಆರ್‌ಡಿಬಿ ಮಾಜಿ ಅಧ್ಯಕ್ಷರಾದ ದತ್ತತ್ರಾಯ ಸಿ. ಪಾಟೀಲ, ಉದ್ದಿಮೆ ದಾರರು ಹಾಗೂ ಶಿಕ್ಷಣ ಪ್ರೇಮಿಗಳಾದ ರಾಮಚಂದ್ರ ಡಿ. ರಘೋಜಿ ಆಗಮಿಸುತ್ತಿದ್ದಾರೆ. ಅತಿಥಿಗಳಾಗಿ ಬೆಂಗಳೂರಿನ ಅಫೆಕ್ಸ್ ಬ್ಯಾಂಕ್ ನಿರ್ದೇಶಕರಾದ ಶಿವಾನಂದ ಮಾನಕರ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ಡಾ.ಸುರೇಶ ಆರ್ ಸಜ್ಜನ, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೋಮಶೇಖರ ಹಂಚನಾಳ, ಗಾಣಿಗ ಸಮಾಜದ ಜಿಲ್ಲಾಧ್ಯಕ್ಷರಾದ ಶರಣಕುಮಾರ ಬಿಲ್ಲಾಡ, ಖ್ಯಾತ ಉದ್ದಿಮೆದಾರರಾದ ಸುಶೀಲಕುಮಾರ ಮಾಮಡಿ, ದಾಲ ಮಿಲ್ಲರ್ಸ್ ಅಸೋಸಿಯೇಷನ್ ಉಪಾಧ್ಯಕ್ಷರಾದ ವಿಷ್ಣುದಾಸ ತಪಾಡಿಯ, ಶ್ರೀ ಯೋಗಿರಾಜೇಂದ್ರ ಶಿವಾಚಾರ್ಯ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿಗಳಾದ ಓಂಕಾರೇಶ್ವರ ಗೋಸಿಮಠ ಆಗಮಿಸುತ್ತಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿ ಹಣಮಂತರಾಯ ಎಸ್ ಅಟ್ಟೂರ ವಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಶರಣಗೌಡ ಕಿರಣಗಿ, ಭೀಮು ಚೌಹಾಣ, ಶಿವಾನಂದ ಬಿರಾದಾರ, ದಿನಕರ ಮೂಲಗೆ, ಚನ್ನಮಲ್ಲಯ್ಯ ಹಿರೇಮಠ ಅವರಿಗೂ ಸನ್ಮಾನಿಸಲಾಗುವದು. ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.
ಮೊ. 9945711036 ಪತ್ರಿಕಾಗೋಷ್ಠಿಯಲ್ಲಿ ಶಿವಾನಂದ ಕೊಂಬಾಡೆ,ಹಣಮಂತ ಬಿರಾದಾರ, ಶಾಮರಾವ ಜೀವಣಗಿ, ಸಂಗಮೇಶ ನಾಗೂರ, ಪೀರಪ್ಪ ಪೂಜಾರಿ, ಚಂದ್ರಕಾಂತ ತಾವರಗೇರಾ,ಜಗದೀಶ ಪೂಜಾರಿ ಉಪಸ್ಥಿತರಿದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ತಾಲೂಕಿನ ಯಾಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಶಹಾಬಾದ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿಎ. ನಾರಾಯಣಗೌಡ ರವರ ಆದೇಶದ ಮೇರೆಗೆ ಹಾಗೂ ಜಿಲ್ಲಾಧ್ಯಕ್ಷರಾದ ಆನಂದ ದೊಡ್ಡಮನಿ ಹಾಗೂ…
ಶಹಾಬಾದ: ನಗರಸಭೆ ವಾರ್ಡ ನಂ. 3 ರ ಉಪಚುನಾವಣೆ ಪ್ರಯುಕ್ತ ಗುರುವಾರ ಬೆಳಿಗ್ಗೆ ಕಲಬುರಗಿ ಗ್ರಾಮಿಣ ಶಾಸಕರಾದ ಬಸವರಾಜ ಮತ್ತಿಮಡು…
ಕಲಬುರಗಿ: ಕಲ್ಯಾಣ ಕರ್ನಾಟಕ ರೈತಾಪಿ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಬಳಿರಾಮ ರಾಮಜಿ ಚೌವ್ಹಾಣ, ಹಾಗೂ ತಾಲೂಕು ಅಧ್ಯಕ್ಷರನ್ನಾಗಿ ಶಿವರಾಜ ದೇಶಮುಖಪ್ಪಾ…
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…