KKRTC ಚಾಲನಾ ವೃತ್ತಿ ಪರೀಕ್ಷೆಗೆ ನೇಮಕಾತಿ: ಹಾಜರಾಗದೇ ಇರುವ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ

0
23

ಕಲಬುರಗಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿಯ (ನೇಮಕಾತಿ ಜಾಹೀರಾತು ಸಂಖ್ಯೆ:01/2020 ದಿನಾಂಕ:03.01.2020 ರಡಿ) ಚಾಲನಾ ವೃತ್ತಿ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರವನ್ನು ಕಳುಹಿಸಿದ್ದರೂ ಸಹ ಹಲವಾರು ಅಭ್ಯರ್ಥಿಗಳು ಈವರೆಗೆ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ. ಈವರೆಗೆ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಜನವರಿ 9 ರಿಂದ 12 ರವರೆಗೆ ನಡೆಯಲಿರುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ನಿಗಮದ ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈಗಾಗಲೇ ಚಾಲನಾ ವೃತ್ತಿ ಪರೀಕ್ಷೆಗೆ ಅನರ್ಹರಾದ ಹಾಗೂ ಪರೀಕ್ಷೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ. ಈ ವರೆಗೆÉ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇರುವ ಅಭ್ಯರ್ಥಿಗಳು ನಿಗಮದ https://kkrtcjobs.karnataka.gov.in/drivingtest ವೆಬ್‍ಸೈಟ್‍ಗೆ ಭೇಟಿ ನೀಡಿ ತಮ್ಮ ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಮೇಲ್ಕಂಡ ದಿನದಂದು ಬೀದರ ಜಿಲ್ಲೆಯ ಹುಮನಾಬಾದ ನಿಗಮದ “ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆಯುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಬೇಕು.

Contact Your\'s Advertisement; 9902492681

ಒಂದು ವೇಳೆ ಅಭ್ಯರ್ಥಿಗಳು ಮೇಲ್ಕಂಡ ದಿನಗಳಂದು ನಡೆಯುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇದ್ದಲ್ಲಿ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ. ಇದು ತಮಗೆ ಕಲ್ಪಿಸಲಾದ ಕೊನೆಯ ಅವಕಾಶ ಎಂದು ಪರಿಗಣಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಈ ಹಿಂದೆ ನಿಗದಿಪಡಿಸಿದ ಚಾಲನಾ ವೃತ್ತಿ ಪರೀಕ್ಷೆಯನ್ನು 2023ರ ಜುಲೈ 3 ರಂದು ಪ್ರಾರಂಭಿಸಿ 2024ರ ಜನವರಿ 9 ರಂದು ಮುಕ್ತಾಯಗೊಳಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ನಿಗಮದ ಸಹಾಯವಾಣಿ ಮೊಬೈಲ್ ಸಂಖ್ಯೆ 6366374977 ಮತ್ತು ಸ್ಥಿರ ದೂರವಾಣಿ ಸಂಖ್ಯೆ 08472-227687 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here