ಕಲಬುರಗಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿಯ (ನೇಮಕಾತಿ ಜಾಹೀರಾತು ಸಂಖ್ಯೆ:01/2020 ದಿನಾಂಕ:03.01.2020 ರಡಿ) ಚಾಲನಾ ವೃತ್ತಿ ಪರೀಕ್ಷೆಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಕರೆಪತ್ರವನ್ನು ಕಳುಹಿಸಿದ್ದರೂ ಸಹ ಹಲವಾರು ಅಭ್ಯರ್ಥಿಗಳು ಈವರೆಗೆ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ. ಈವರೆಗೆ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇರುವ ಅರ್ಹ ಅಭ್ಯರ್ಥಿಗಳಿಗೆ ಇದೇ ಜನವರಿ 9 ರಿಂದ 12 ರವರೆಗೆ ನಡೆಯಲಿರುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಲು ಕೊನೆಯ ಅವಕಾಶ ಕಲ್ಪಿಸಲಾಗಿದೆ ಎಂದು ನಿಗಮದ ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈಗಾಗಲೇ ಚಾಲನಾ ವೃತ್ತಿ ಪರೀಕ್ಷೆಗೆ ಅನರ್ಹರಾದ ಹಾಗೂ ಪರೀಕ್ಷೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ. ಈ ವರೆಗೆÉ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇರುವ ಅಭ್ಯರ್ಥಿಗಳು ನಿಗಮದ https://kkrtcjobs.karnataka.gov.in/drivingtest ವೆಬ್‍ಸೈಟ್‍ಗೆ ಭೇಟಿ ನೀಡಿ ತಮ್ಮ ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ಮೇಲ್ಕಂಡ ದಿನದಂದು ಬೀದರ ಜಿಲ್ಲೆಯ ಹುಮನಾಬಾದ ನಿಗಮದ “ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ನಡೆಯುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಬೇಕು.
ಒಂದು ವೇಳೆ ಅಭ್ಯರ್ಥಿಗಳು ಮೇಲ್ಕಂಡ ದಿನಗಳಂದು ನಡೆಯುವ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗದೇ ಇದ್ದಲ್ಲಿ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶ ನೀಡಲಾಗುವುದಿಲ್ಲ. ಇದು ತಮಗೆ ಕಲ್ಪಿಸಲಾದ ಕೊನೆಯ ಅವಕಾಶ ಎಂದು ಪರಿಗಣಿಸಬೇಕು. ಅರ್ಹ ಅಭ್ಯರ್ಥಿಗಳಿಗೆ ಈ ಹಿಂದೆ ನಿಗದಿಪಡಿಸಿದ ಚಾಲನಾ ವೃತ್ತಿ ಪರೀಕ್ಷೆಯನ್ನು 2023ರ ಜುಲೈ 3 ರಂದು ಪ್ರಾರಂಭಿಸಿ 2024ರ ಜನವರಿ 9 ರಂದು ಮುಕ್ತಾಯಗೊಳಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ನಿಗಮದ ಸಹಾಯವಾಣಿ ಮೊಬೈಲ್ ಸಂಖ್ಯೆ 6366374977 ಮತ್ತು ಸ್ಥಿರ ದೂರವಾಣಿ ಸಂಖ್ಯೆ 08472-227687 ಗೆ ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…