ಕಲಬುರಗಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಧರ್ಮಸೇನ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ಹಾಗೂ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ರವರ ಶಿಫಾರಸ್ಸಿನ ಮೇರೆಗೆ ಕಲಬುರಗಿ ದಕ್ಷಿಣ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರನ್ನಾಗಿ ಅರುಣಕುಮಾರ ಎನ್. ಇನಾಮದಾರ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶೀಷ್ಟ ಜಾತಿ ವಿಭಾಗದ ಅಧ್ಯಕ್ಷ ಮಹಾಂತಪ್ಪ ಕೆ. ಸಂಗಾವಿ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ ತಮ್ಮ ಸೇವೆಯನ್ನು ಪರಿಶಿಷ್ಟ ಜಾತಿಯ ಸಮುದಾಯದ ಸಂಘಟನೆ ಹಾಗೂ ಕಾಂಗ್ರೆಸ್ ಪಕ್ಷದ ಪ್ರಗತಿಪರ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸಿ, ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸಲು ಹಗಲಿರುಳು ಶ್ರಮ ವಹಿಸುತ್ತಿರೆಂದು ನಂಬಿ ಕಾಂಗ್ರೆಸ್ ಪಕ್ಷದ ಈ ಮಹತ್ವದ ಜವಾಬ್ದಾರಿಯನ್ನು ತಮಗೆ ವಹಿಸಲಾಗಿದೆ.
ತಾವುಗಳು ಈ ಜವಾಬ್ದಾರಿಯನ್ನು ಹೊತ್ತುಕೊಂಡು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರ ಸಹಯೋಗದೊಂದಿಗೆ ಬೆರೆತು ಈ ದಿಸೆಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…