ಸುರಪುರ: ಯಾದಗಿರಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ಕಂದಾಯ ನೌಕರರ ಕ್ರೀಡಾಕೂಟ ಇರುವ ಕಾರಣ ನಾನು ಸೇರಿದಂತೆ ಎಲ್ಲಾ ಕಂದಾಯ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕಾರಣ ಕಚೇರಿಯಲ್ಲಿ ಅಲಭ್ಯರಾಗಿರುತ್ತೇವೆ ಸಾರ್ವಜನಿಕರು ಸಹಕರಿಸಬೇಕು ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ಜನರಲ್ಲಿ ವಿನಂತಿಸಿ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ತಹಸೀಲ್ದಾರ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ವರ್ಷವಿಡೀ ಕೆಲಸ ಮಾಡುವ ಕಂದಾಯ ನೌಕರರಿಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೂರು ದಿನಗಳ ಕಾಲ ಕ್ರಿಡಾಕೂಟ ನಡೆಯಲಿದೆ,ಆದ್ದರಿಂದ ಜನೆವರಿ 6,7 ಮತ್ತು 8 ರಂದು ಕಚೇರಿಯಲ್ಲಿ ಲಭ್ಯವಿರದ ಕಾರಣ ಸಾರ್ವಜನಿಕರು ಅರ್ಜೆಂಟಾಗಿರುವ ಏನಾದರು ವಿಷಯವಿದ್ದಲ್ಲಿ ಅಥವಾ ಮನವಿ ಸಲ್ಲಿಸುವುದಾದಲ್ಲಿ ಕಚೇರಿಯ ಆವಕದಲ್ಲಿ ಸಲ್ಲಿಸಿ ಸ್ವೀಕೃತಿ ಪಡೆಯಬಹುದಾಗಿದೆ.ಆದ್ದರಿಂದ ಸಾರ್ವಜನಿಕರು ಸಹಕರಿಸಲು ವಿನಂತಿಸುವುದಾಗಿ ತಿಳಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…