ಬಿಸಿ ಬಿಸಿ ಸುದ್ದಿ

ಅರಣ್ಯ ಇಲಾಖೆಗೆ ಕೆಕೆಆರ್ ಡಿಬಿಯಿಂದ ರೂ. 30 ಕೋಟಿ ಅನುದಾನ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ ರೂ 30 ಕೋಟಿ ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಈ ಅನುದಾನ ಬಳಸಿಕೊಳ್ಳಬೇಕು. ಇದಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಮಾನ್ಯ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದ ಸಚಿವರು ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ ಎಂದು ಕಾಳಜಿ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಮಾನವ ಹಾಗೂ ವನ್ಯಜೀವಿ ಗಳ ಸಂಘರ್ಷ ನಿಲ್ಲಬೇಕು ಎನ್ನುವುದು ಎಲ್ಲರ ಕೂಗು. ಆದರೆ, ನಿಮಗೆ ಸರಿಯಾದ ಸೌಕರ್ಯ ಕೊಟ್ಟಾಗ ಮಾತ್ರ ಸಂಘರ್ಷ ತಡೆಯಲು ಅನುಕೂಲವಾಗುತ್ತದೆ‌. ಹಾಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲು ಬದ್ಧ ಎಂದರು.

ಸುಮಾರು 2 ದಶಕಗಳ ನಂತರ ಕಲಬುರಗಿ ಯಲ್ಲಿ ಕ್ರೀಡಾ ಕೂಟ ನಡೆಯುತ್ತಿದೆ. ರಾಜ್ಯದ 13 ವೃತ್ತಗಳಿಂದ 1200 ಕ್ಕೂ ಸ್ಪರ್ಧಾಳುಗಳು ಭಾಗಿಯಾಗಿ, ಒಟ್ಟು 271 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ ಅವರಿಗೆ ನನ್ನ ಶುಭಾಶಯಗಳು ಎಂದರು.

ವೇದಿಕೆಯ ಮೇಲೆ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸುದರ್ಶನ್, ಬ್ರಿಜೇಶ್ ಕುಮಾರ, ಬಿಶ್ವಜಿತ್ ಮಿಶ್ರಾ, ಶಾಶ್ವತಿ ಮಿಶ್ರ ಸೇರಿದಂತೆ ಹಲವರಿದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago