ಕಲಬುರಗಿ: ನಗರದ ವಾಜಪೇಯಿ ಬಡಾವಣೆಯಲ್ಲಿ ಇರುವ ಸ್ಪರ್ಧಾತ್ಮಕ ಪರೀಕ್ಷೆಗಳ ಕಟ್ಟಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಈ ಸಲದ ಬಜೆಟ್ ಒಳಗಡೆಯಲ್ಲಿ ಪ್ರಾರಂಭಿಸಲು ಬೇಕಾಗುವ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು.
ಕಟ್ಟಡ ವೀಕ್ಷಣೆಯ ಬಳಿಕ ನಡೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಹಿಂದುಳಿದ ಕಲಬುರಗಿ ಜಿಲ್ಲೆಯಲ್ಲಿ ಐಎಎಸ್, ಕೆಎಎಸ್, ನೀಟ್, ಜೆಇಇ, ಬ್ಯಾಂಕಿಂಗ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಎಲ್ಲ ಸೌಲಭ್ಯಯುಳ್ಳ ಕಟ್ಟಡ ನಿರ್ಮಾಣ ಮಾಡಲಾಗಿದ್ದು. ತರಬೇತಿ ತರಗತಿಗಳು ಪ್ರಾರಂಭವಾಗಬೇಕಿದೆ. ಅಗತ್ಯ ತರಬೇತಿ ನೀಡುವ ಉಪನ್ಯಾಸಕರು ಹೈದರಾಬಾದ್, ಚೆನ್ನೈ ಸೇರಿದಂತೆ ಬೇರೆ ಭಾಗದಲ್ಲಿ ಇದ್ದರೆ ಅವರನ್ನೇ ಕರೆಸಿ ಅವರಿಂದ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ ಸಚಿವರು ಒಟ್ಟಾರೆಯಾಗಿ ಈ ಸಲದ ಬಜೆಟ್ ಒಳಗಡೆ ತರಬೇತಿ ನೀಡುವಂತಾಗಬೇಕು ಎಂದು ಸಚಿವರು ಹೇಳಿದರು.
ತರಬೇತಿಗಾಗಿ ಹಾಗೂ ಇತರೆ ಸೌಲಭ್ಯಗಳಿಗಾಗಿ ಬೇಕಾಗುವ ರೂ 10 ಕೋಟಿ ಅನುದಾನವನ್ನು ಕೆಕೆಆರ್ ಡಿಬಿಯಿಂದ ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ MLC ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ,ಎಸ್ ಪಿ ಅಡ್ಡೂರು ಶ್ರೀನಿವಾಸಲು, ಹಾಗೂ ಅಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…