ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯದಿಂದ ಪ್ರದಾನ ಮಾಡುವ ನಾಡೋಜ ಪದವಿಗೆ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಇದೇ ಜನವರಿ ೧೦ರಂದು ನಡೆಯುವ ೩೨ನೇ ಘಟಿಕೋತ್ಸವದಲ್ಲಿ ಮಾನ್ಯ ರಾಜ್ಯಪಾಲರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪದವಿ ಪ್ರಧಾನ ಮಾಡಲಿದ್ದಾರೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ತಿಳಿಸಿದರು.
ಕನ್ನಡ ವಿಶ್ವವಿದ್ಯಾಲಯದ ಮಂಟಪ ಸಭಾಂಗಣದ ಸಿಂಡಿಕೇಟ್ ಹಾಲ್‌ನಲ್ಲಿ ದಿನಾಂಕ ೦೫.೦೧.೨೦೨೪ರಂದು ೩೨ನೇ ನುಡಿಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸಮಾಜ ಸೇವೆಯಲ್ಲಿನ ಸಾಧನೆಗಾಗಿ ಬೀದರ್ ಜಿಲ್ಲೆಯ ಭಾಲ್ಕಿ ಹಿರೇಮಠದ ಡಾ. ಬಸವಲಿಂಗ ಪಟ್ಟದೇವರು, ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗಾಗಿ ಆಂಧ್ರಪ್ರದೇಶದ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಡಾ. ತೇಜಸ್ವಿ ವಿ. ಕಟ್ಟಿಮನಿ ಮತ್ತು ವಿಜ್ಞಾನ ಕ್ಷೇತ್ರದಲ್ಲಿನ ನ್ಯಾನೋ ಟೆಕ್ನಾಲಜಿ ವಿದ್ವಾಂಸರು ಹಾಗೂ ನ್ಯಾಕ್ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ.ಎಸ್.ಸಿ. ಶರ್ಮಾ ಅವರನ್ನು ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತನಾಡೋಜ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
೩೨ನೇ ನುಡಿಹಬ್ಬ ಕಾರ್ಯಕ್ರಮದಲ್ಲಿ ಅನಂತಪುರಂನ ಆಂಧ್ರ ಪ್ರದೇಶ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಸ್.ಎ ಕೋರಿ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವರು ಮತ್ತು ಸಮಕುಲಾಧಿಪತಿಗಳೂ ಆಗಿರುವ ಶ್ರೀ ಡಾ.ಎಂ.ಸಿ. ಸುಧಾಕರ್ ಅವರು ಡಿ.ಲಿಟ್. ಹಾಗೂ ಪಿಎಚ್.ಡಿ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ.
ಈ ಬಾರಿಯ ಘಟಿಕೋತ್ಸವದಲ್ಲಿ ೧ ಡಿ.ಲಿಟ್ ಹಾಗೂ ೨೬೪ಕ್ಕೂ ಹೆಚ್ಚು ಸಂಶೋಧನಾರ್ಥಿಗಳು ಪಿಎಚ್‌ಡಿ ಪದವಿ ಪಡೆಯಲಿದ್ದು, ಇದು ಕನ್ನಡ ವಿಶ್ವವಿದ್ಯಾಲಯದ ಇತಿಹಾಸದಲ್ಲೇ ದಾಖಲೆ. ಅತಿ ಕಡಿಮೆ ಸಂಖ್ಯೆಯಿರುವ ಕೇರಳದ ಪಣಿಯನ್ ಬುಡಕಟ್ಟು ಸಮುದಾಯದ ಕುರಿತು ಸಂಶೋಧನೆಯನ್ನು ಅದೇ ಸಮುದಾಯದ ವಿದ್ಯಾರ್ಥಿನಿ ಕುಮಾರಿ ದಿವ್ಯ ಅವರು ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪಿಎಚ್.ಡಿ ಪಡೆಯಲಿದ್ದು, ಇದು ಕನ್ನಡ ವಿಶ್ವವಿದ್ಯಾಲಯಕ್ಕೂ ಮತ್ತು ಪಣಿಯನ್ ಸಮುದಾಯಕ್ಕೂ ಹೆಮ್ಮೆಯ ವಿಷಯ ಎಂದರು.
ಘಟಿಕೋತ್ಸವ ಮುನ್ನ ದಿನವಾದ ಜನವರಿ ೦೯ರಂದು ಮಂಟಪ ಸಭಾಂಗಣದಲ್ಲಿ ಪ್ರಸಾರಂಗದಿಂದ ಪ್ರಕಟಣೆಗೊಂಡ ೫೧ ಪುಸ್ತಕಗಳನ್ನು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಿ.ಕೆ. ರವಿ ಅವರು ಬಿಡುಗಡೆಗೊಳಿಸಲಿದ್ದಾರೆ ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೋ. ಲಕ್ಷಣ ತೆಲಗಾವಿ ಅವರು ಮಾತನಾಡಲಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ವಿಜಯ್ ಪೂಣಚ್ಛ ತಂಬಂಡ, ಅಧ್ಯಯನಾಂಗದ ನಿರ್ದೇಶಕರಾದ ಡಾ.ಮಹದೇವಯ್ಯ, ವಿವಿಧ ನಿಕಾಯಗಳ ಡೀನರು, ಹಣಕಾಸು ಅಧಿಕಾರಿಗಳು, ಮಾಧ್ಯಮ ಮತ್ತು ಆಮಂತ್ರಣ ಪತ್ರಿಕೆ ವಿತರಣಾ ಸಮಿತಿಯ ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…