ಚಿಂಚೋಳಿ: ಕಾಳಗಿ ತಾಲ್ಲೂಕಿನ ಡಾ. ಬಿ ಆರ್ ಅಂಬೇಡ್ಕರ್ ಸರ್ಕಲ್ ಹತ್ತಿರ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಸ್ವಾಮಿನಾಥನ್ ವರದಿ ಮಾಡಿ ಹುಬಳ್ಳಿ ಮಟ್ಟದಲ್ಲಿ ಉದ್ದು ಹೆಸರು ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರಸ್ತೆ ತಡೆ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಶರಬಸಪ್ಪ ಮಮಶೇಟಿ ಮಾತನಾಡಿ ಜಿಲ್ಲೆಯಲ್ಲಿ ಬೆಳೆಗಳ ರಾಶಿ ನಡೆದುರು ಜನಪ್ರತಿನಿಧಿಗಳು ರೈತರ ಕುರಿತು ಕಾಳಜಿ ವಹಿಸಿದೆ ನಿರ್ಲಕ್ಷ್ಯ ತೊರುತ್ತಿದ್ದಾರೆ, ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರು ಕಂಗಾಲಾಗುತ್ತಿದ್ದಾರೆಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೆ ರಾಜ್ಯದಲ್ಲಿ ಸ್ವಾಮಿನಾಥನ್ ವರದಿ ಜಾರಿಗೊಳಿಸಿ ಹುಬಳ್ಳಿ ವ್ಯಪ್ತಿಗೆ ಬೆಳೆ ಖರೀದಿ ಕೇಂದ್ರಗಳು ತೆರೆಯಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುವ ಮೂಲಕ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರೈತರು ಸೇರಿದಂತೆ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.