ಕಲಬುರಗಿ; ಪಾನನಿಷೇಧಕ್ಕೆ ರಾಷ್ಟ್ರ ಮಟ್ಟದಲ್ಲಿ ಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಪ್ರಧಾನಿಯನ್ನು ಒತ್ತಾಯಿಸೋಣ ಎಂದು ಸಿಎಂ ರಾಜಕೀಯ ಸಲಹೆಗಾರ ಹಾಗೂ ಶಾಸಕ ಬಿ.ಆರ್.ಪಾಟೀಲ್ ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಕಚೇರಿ ಆವಣರದಲ್ಲಿ ನಡೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದಲ್ಲಿ ಪಾನನಿಷೇಧಕ್ಕೆ ನಾನು ಪ್ರಸ್ತಾಪಿಸಿದ್ದೆ. ಆಗ ಸಿಎಂ, ಪಾನ ನಿಷೇಧ ಒಂದು ರಾಜ್ಯದಿಂದ ಅಗುವಂತದಲ್ಲ. ಒಂದು ರಾಜ್ಯ ನಿಷೇಧ ಮಾಡಿದರೆ ಪಕ್ಕದ ರಾಜ್ಯದಿಂದ ಅಕ್ರಮವಾಗಿ ಒಳಬರುವ ಸಾಧ್ಯತೆ ಇರುತ್ತದೆ. ಆಗ ಮತ್ತಷ್ಟು ಸಮಸ್ಯೆಯಾಗುತ್ತದೆ ಎಂದಾಗ ನನಗೆ ಮನವರಿಕೆಯಾಯಿತು ಎಂದು ಪಾಟೀಲ್ ಹೇಳಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಆಯೋಗ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ರಾಜ್ಯಕ್ಕೆ ಬರಬೇಕಾದ ಅನುದಾನ ಬಂದಿಲ್ಲ. ಹಾಗಾಗಿ, ರಾಜ್ಯದ ಎಲ್ಲ ಶಾಸಕರು ಸಂಸತ್ ಭವನದ ಮುಂದೆ ಪ್ರತಿಭಟನೆ ನಡೆಸಲು ಸಿದ್ದ ಎಂದರು.
ತಾವು ಸಿಎಂ ಅವರ ಸಲಹೆಗಾರರಾಗಿದ್ದು, ಅವರಿಗೆ ರಾಜಕೀಯ ಜ್ಞಾನ ಇಲ್ಲ ಎಂದರ್ಥವಲ್ಲ. ಅವರಿಗೆ ಬಡವರ ಬಗ್ಗೆ, ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಬಗ್ಗೆ ಅಪಾರ ಕಾಳಜಿ ಇದೆ. ಈ ನಿಟ್ಟಿನಲ್ಲಿ ಅವರು ಸದಾ ಚಿಂತನೆಯಲ್ಲಿ ಇರುತ್ತಾರೆ. ಆದರೂ ಅವರಿಗೆ ಸಲಹೆ ನೀಡುತ್ತೇನೆ. ಸ್ವೀಕರಿಸುವುದು ಅವರಿಗೆ ಬಿಟ್ಟಿದ್ದು. ಆದರೆ ನನ್ನ ಎಲ್ಲ ಸಲಹೆಗಳನ್ನು ಅವರು ಸ್ವೀಕರಿಸುತ್ತಾರೆ ಎನ್ನುವ ಆಸೆ ನನಗಿಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸುತ್ತೇನೆ ಎಂದರು.
ಮುಂಬುರುವ ಲೋಕಸಭಾ ಚುನಾವಣೆಗೆ ಮತ್ತೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ಕಲಬುರಗಿ ಯಿಂದ ಸ್ಪರ್ಧೆಸುವಂತೆ ನಾವೆಲ್ಲ ಒತ್ತಾಯಿಸೋಣ. ಮತದಾರರ ಕೈ ಕಾಲು ಹಿಡಿದಾದರೂ ಮತ ಹಾಕಿಸೋಣ ಎಂದು ಅಭಿಪ್ರಾಯ ಪಟ್ಟರು.
ಬುದ್ದ ಬಸವ ಅಂಬೇಡ್ಕರ ಅವರ ನಾಡಿನಲ್ಲಿ ಹೊಸ ಚೈತನ್ಯ ಮೂಡಿಸಬೇಕಿದೆ. ಸಂವಿಧಾನ ಉಳಿಯಬೇಕು. ಸೈದ್ದಾಂತಿಕ ಅರಿವು ಮೂಡಿಸಬೇಕಿದೆ. ಇಲ್ಲದಿದ್ದರೆ ಅಪಾಯ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ ಪಾಟೀಲ್ ಅವರು ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ನಾವೆಲ್ಲ ಸೇರಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ದಕ್ಷಿಣ ಭಾರತದಲ್ಲಿ ಬಿಜೆಪಿ ಬೆಳೆಯಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಾಗಿಲು ಬಂದ್ ಮಾಡಿದ್ದೇವೆ. ಕೇಜ್ರಿವಾಲ್ ಹಾಗೂ ರಾಹುಲ್ ಹಾಗೆ ಕಾಂಗ್ರೆಸ್ ಮತ್ತು ಮಮತಾ ಒಂದೇ ವೇದಿಕೆಗೆ ಬಂದಿದ್ದಾರೆ. ಬಿಜೆಪಿಯನ್ನು ಮನೆಗೆ ಕಳಿಸುವುದೇ ಎಲ್ಲರ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕು. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಲು ಸಿದ್ದನಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೀರ್ತಿ ತರುವ ಮೂಲಕ ಬಿಜೆಪಿಯನ್ನು ಸೋಲಿಸೋಣ ಎಂದು ಅವರು ಕರೆ ನೀಡಿದರು.
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಸುಭಾಷ ರಾಠೋಡ್, ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಜಗದೇವ್ ಗುತ್ತೇದಾರ್ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…