ಬಿಸಿ ಬಿಸಿ ಸುದ್ದಿ

ವಿವಿಧ ಪತ್ರಿಕೆಗಳಲ್ಲಿ ಕಾರ್ಯಾನಿರ್ವಹಿಸಿದ ಪ್ರಿಂಟರ್ ಆನಂದ ಇನ್ನಿಲ್ಲ

ಕಲಬುರಗಿ: ವಿವಿಧ ಪತ್ರಿಕೆಗಳಲ್ಲಿ ಪ್ರಿಂಟರ್‌ರಾಗಿ ಸೇವೆಸಲ್ಲಿಸಿದ ಹಿರಿಯರಾದ ಆನಂದ ರಾಜಪ್ಪ (69) ಅವರು ಶನಿವಾರ ಸಂಜೆ 6 ಗಂಟೆ ಸುಮಾರಿಗೆ ವಿಜಯವಿದ್ಯಾಲಯದ ಕಾಂಪೌಂಡ್‌ನಲ್ಲಿ ಇರುವ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವಿವಾಹಿತರಾಗಿದ್ದ ಅವರು ತಮ್ಮ ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಆನಂದ ಅವರು ಗ್ರಿನೋಬಲ್ಸ್ ಪತ್ರಿಕೆ, ಸಂಜೆವಾಣಿ ಪತ್ರಿಕೆ, ಮಧುರವಾಣಿ ಪತ್ರಿಕೆ ಹಾಗೂ ಇನ್‌ಕ್ಲಾಬ್ ಎ ಡೆಕ್ಕನ್ ಪತ್ರಿಕೆಗಳಲ್ಲಿ ಮುಖ್ಯ ಪ್ರಿಂಟರ್‌ರಾಗಿ ಸೇವೆ ಸಲ್ಲಿಸಿದ್ದರು.

ನಂದ ರಾಜಪ್ಪ ಅವರ ನೆರಳಲ್ಲಿ ಅನೇಕ ಜನರು ಪ್ರಿಂಟಿಂಗ್ ಅನುಭವ ಪಡೆದುಕೊಂಡು ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ 7 ರಂದು ಮಧ್ಯಾಹ್ನ 2 ಗಂಟೆಗೆ ನಗರದ ವೆಂಕಟೇಶನಗರದ ಕ್ರಿಶನ್ ಸಮುದಾಯ ಸ್ಮಶಾನ ಭೂಮಿಯಲ್ಲಿ ಕ್ರೈಸ್ತ ಸಂಪ್ರದಾಯದಂತೆ ನೆರವೇರಿಸಲಾಗುವದು ಎಂದು ಕುಟುಂಬದವರು ತಿಳಿಸಿದ್ದಾರೆ.

ಆನಂದ ಅವರ ನಿಧನಕ್ಕೆ ಜಿಲ್ಲಾ ಸಂಪಾದಕರ ಹಾಗೂ ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

5 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

11 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

11 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

12 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

23 hours ago