ಬಿಸಿ ಬಿಸಿ ಸುದ್ದಿ

ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡವನ್ನು ರಾಮಭಕ್ತನೇ?: ಪ್ರಿಯಾಂಕ್ ಖರ್ಗೆ

ಕಲಬುರಗಿ: 16 ಕೇಸು ಇರುವವರು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು, ಜೂಜು ಆಡಿಸುವವರು, ಅಕ್ರಮ ಸಾರಾಯಿ ಮಾರಾಟ ಮಾಡುವವರು ರಾಮಭಕ್ತರಾ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿ ಮಾತಮಾಡಿದ ಅವರು, ನಮ್ಮ ಜಿಲ್ಲೆಯಲ್ಲಿಯೇ ಹಲವಾರು ಕೇಸು ಹಾಕಿಸಿಕೊಂಡಿರುವವರು, ಅಪಘಾತವನ್ನು ಹಲ್ಲೆ ಯತ್ನ ಎಂದು ಬಿಂಬಿಸಿದವರು ರಾಮಭಕ್ತರೇ? ಈ ವಿಚಾರದಲ್ಲಿ ಆರ್. ಅಶೋಕ್ ಅವರು ನನ್ನ ರಾಜೀನಾಮೆ ಕೇಳಿದ್ದರು. ಈಗ ಅರೆಸ್ಟ್ ಮಾಡಿ ಎಂದು ಅಭಿಯಾನ ಮಾಡುತ್ತಿದ್ದಾರೆ. ಅಶೋಕಣ್ಣ ನೀವು ಯಾರ ಪರವಾಗಿ ಪ್ರತಿಭಟನೆ ಮಾಡುತ್ತಿದ್ದೀರಾ? ಎಂದು ಯೋಚಿಸಿ ಎಂದು ಕುಟುಕಿದರು.

ಬಾಬಾಬುಡನಗಿರಿ ವಿಚಾರದಲ್ಲಿ ಭಕ್ತರ ಮೇಲೆ‌ ಕೇಸು ದಾಖಲಿಸಿದ್ದು ಈಗಿನ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ರಾಮಭಕ್ತರ ಮೇಲೆ ಕರಸೇವಕರ ಮೇಲೆ ಬಿಜೆಪಿ ಸರ್ಕಾರ ಯಾವ ಕೇಸು ದಾಖಲಿಸಿಲ್ಲ. ಆದರೆ, ಬಹಳ ದಿನ ಬಾಕಿ ಇರುವ ವಾರಂಟ್ ಕೇಸ್ ಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಸೂಚಿಸಿದ್ದರಿಂದ ರಾಜ್ಯ ಸರ್ಕಾರ ಕ್ರಮವಹಿಸುತ್ತಿದೆ ಎಂದರು.

ಈ ಹಿಂದೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಹಾಗೂ ಅಶೋಕ ಅವರೇಕೆ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್ ಪಡೆಯಲಿಲ್ಲ‌ ಎಂದರು.

ಕೇಸರಿ ಶಾಲು ಹಾಕಿದ ತಕ್ಷಣ ಬಿಡಬೇಕೆ?; ಕೇಸರಿ ಶಾಲು ಹಾಕಿಕೊಂಡು ಅಕ್ರಮ ಚಟುವಟಿಕೆ‌ ನಡೆಸಿದರೆ ಸುಮ್ಮನಿರಬೇಕೆ? ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಕಾನೂನು ಬಾಹಿರ ಚಟುವಟಿಕೆ ಮಾಡುವವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ರಾಮಭಕ್ತರೇ?; ನೀವು ರಾಮಭಕ್ತರೇ? ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಿದರೆ ಹೋಗುತ್ತೀರಾ? ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ನಾನು ಸಂವಿಧಾನ ಭಕ್ತ. ನನಗೆ ಆಹ್ವಾನ ನೀಡಲು ಬಿಜೆಪಿಯರು ಯಾರು? ಬಿಜೆಪಿಯವರ ಸೂಚನೆಯಂತೆ ಟ್ರಸ್ಟ್ ಆಹ್ವಾನ ನೀಡುತ್ತಿದೆ. ಅಲ್ಲಿ ನಡೆಯುತ್ತಿರುವುದು ಒನ್ ಮ್ಯಾನ್ ಶೋ ಎಂದರು.

ಎಂಪಿ ಚುನಾವಣೆಗೆ ಸಿದ್ಧ; ಹೈಕಮಾಂಡ್ ಸೂಚಿಸಿದರೆ ಸಚಿವರು‌ಗಳು ಮುಂಬರುವ ಎಂ ಪಿ ಚುನಾವಣೆಗೆ ನಿಲ್ಲಲು ರೆಡಿಯಾಗಿರುವುದಾಗಿ ಹೇಳಿದ ಸಚಿವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ.

ಎಚ್ ಡಿಡಿ ಮೊದಲು ಜೆಡಿಎಸ್ ಉಳಿಸಿಕೊಳ್ಳಲಿ; ಕಾಂಗ್ರೆಸ್ ಪಕ್ಷದ ಕುರಿತು ಮಾತನಾಡುವ ಮೊದಲು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮೊದಲು ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಈ ಹಿಂದೆ ಯಾರು ಹೇಗೆ ಸಿಎಂ ಹಾಗೂ ಪ್ರಧಾನಿ ಆಗಿದ್ದರು ಎಂದು ಅವರು ನೋಡಲಿ ಎಂದು ಪ್ರಿಯಾಂಕ್ ಟಾಂಗ್ ಕೊಟ್ಟರು.

ಜಾತಿಗೊಬ್ಬ ಡಿಸಿಎಂ; ಜಾತಿಗೊಬ್ಬ ಡಿಸಿಎಂ ನೇಮಿಸುವ ಕುರಿತಂತೆ ಕೂಗೆದ್ದಿದೆ ಎನ್ನುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಈ ವಿಚಾರದಲ್ಲಿ ತಮ್ಮ ಅಭಿಪ್ರಾಯ ಹೇಳಲು ಪಕ್ಷದಲ್ಲಿ ಆಂತರಿಕ‌ ಸ್ವಾತಂತ್ರ್ಯ ವಿದೆ. ಆದರೆ,‌ಹೈಕಮಾಂಡ್ ಈ‌ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದರು.

emedialine

Recent Posts

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 hour ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

8 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

8 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

9 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

19 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

19 hours ago