ಕಲಬುರಗಿ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜನವರಿ 10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜಿನ ಎದುರಿಗೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಸ್ಪೇಕ್ಟ್ರಮ್ ಟ್ಯಾಲೆಂಟ್ ಮ್ಯಾನೇಜ್‍ಮೆಂಟ್‍ದಲ್ಲಿ ಅಸೆಂಬ್ಲಿಂಗ್ ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ, (ಬಿ.ಇ., ಪಿ.ಜಿ. ಹೊರತುಪಡಿಸಿ) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಜೊಯಾಲುಕಾಸ್‍ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ/ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಸೇಲ್ಸ್‍ಟ್ರೈನಿ ಹುದ್ದೆಗೆ ಯಾವುದೇ ಪದವಿ/ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.
ಓಂ ಇನೋವೇಶನ್ಸ್‍ದಲ್ಲಿ ಟೆಲಿಕಾಲರ್ಸ್ ಹುದ್ದೆಗೆ ಪಿಯುಸಿ/ ಇತರೆ ಯಾವುದೇ ವಿದ್ಯಾರ್ಹತೆ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಟ್ಯಾಲಿ ಸೊಲ್ಯೂಷನ್ಸ್‍ದಲ್ಲಿ ಟ್ಯಾಲಿ ಸೊಲ್ಯೂಷನ್ಸ್ ಹುದ್ದೆಗೆ ಪಿಯುಸಿ, ಬಿಬಿಎ, ಬಿ.ಕಾಂ., ಬಿಬಿಎಂ, ಎಂಬಿಎ, ಎಂ.ಕಾಂ. ಹುದ್ದೆಗೆ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ವಿದ್ಯಾರ್ಹತೆಗಳ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲ್ಲಿ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 8003343944 (ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ) ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.